Latest

*ಈ ಜಿಲ್ಲೆಗಳಲ್ಲಿ ಭಾರಿ ಮಳೆ ಮುನ್ಸೂಚನೆ; ಅಲರ್ಟ್ ಘೋಷಣೆ*

ಪ್ರಗತಿವಾಹಿನಿ ಸುದ್ದಿ: ರಾಜ್ಯದ ಹಲವೆಡೆ ಭಾರಿ ಮಳೆಯಾಗಲಿದೆ ಎಂದು ಹವಾಮಾನ ಇಲಾಖೆ ಮುನ್ಸೂಚನೆ ನೀಡಿದೆ. ಅದರಲ್ಲಿಯೂ ರಾಜಧಾನಿ ಬೆಂಗರಿನಲ್ಲಿ 5 ದಿನಗಳ ಕಾಲ ಗುಡುಗು ಸಹಿತ ವ್ಯಾಪಕ ಮಳೆಯಾಗಲಿದೆ.

Home add -Advt

ಇಂದಿನಿಂದ ಬೆಂಗಳೂರು ನಗರ, ಬೆಂಗಳೂರು ಗ್ರಾಮಾಂತರ, ರಾಮನಗರ, ಹಾಸನ, ಮಂಡ್ಯ, ಕೊಡಗು, ಚಾಮರಾಜನಗರ, ತುಮಕೂರು ಜಿಲ್ಲೆಗಳಲ್ಲಿ ಧಾರಾಕಾರ ಮಳೆಯಾಗಲಿದ್ದು, ಯೆಲ್ಲೋ ಅಲರ್ಟ್ ಘೋಷಿಸಲಾಗಿದೆ.

ಕರಾವಳಿ ಜಿಲ್ಲೆಗಳಾದ ಉಡುಪಿ, ದಕ್ಷಿಣ ಕನ್ನಡ, ಉತ್ತರ ಕನ್ನಡ ಹಾಗೂ ಶಿವಮೊಗ್ಗ, ಚಿಕ್ಕಮಗಳುರು, ಧಾರವಾಡ, ಕೊಪ್ಪಳ, ಗದಗ, ಹಾವೇರಿ, ರಾಯಚೂರು, ಚಿತ್ರದುರ್ಗ, ಕೋಲಾರ, ಮೈಸೂರು ಸೇರಿದಂತೆ 16ಕ್ಕೂ ಹೆಚ್ಚು ಜಿಲ್ಲೆಗಳಲ್ಲಿ ಮಳೆಯಾಗಲಿದೆ.

ರಾಜಧಾನಿ ಬೆಂಗಳೂರಿನಲ್ಲಿ ನಿನ್ನೆ ದಾಖಲೆ ಪ್ರಮಾಣದಲ್ಲಿ ಮಳೆಯಾಗಿದೆ. ಇಂದು ಕೂಡ ಸಂಜೆ ವೇಳೆಗೆ ಭಾರಿ ಮಳೆಯಾಗಲಿದ್ದು, ಅಲರ್ಟ್ ಘೋಷಿಸಲಾಗಿದೆ.


Related Articles

Back to top button