Karnataka News
*ಆಸ್ಪತ್ರೆಯಲ್ಲಿಯೇ ಆತ್ಮಹತ್ಯೆಗೆ ಶರಣಾದ ವೈದ್ಯ*

ಪ್ರಗತಿವಾಹಿನಿ ಸುದ್ದಿ: ಆಸ್ಪತ್ರೆಯಲ್ಲಿಯೇ ನೇಣುಬಿಗಿದುಕೊಂಡು ವೈದ್ಯ ಸಾವನ್ನಪ್ಪಿರುವ ಘಟನೆ ವಿಜಯಪುರ ಜಿಲ್ಲೆಯ ತಾಳಿಕೋಟೆ ಪಟ್ಟಣದಲ್ಲಿ ನಡೆದಿದೆ.
ಡಾ.ರಾಜಶೇಖರ್ ಮುಚ್ಚಂಡಿ. ಆತ್ಮಹತ್ಯೆಗೆ ಶರಣಾಗಿರುವ ವೈದ್ಯ. ವಿಜಯಪುರ ಜಿಲ್ಲೆಯ ತಾಳಿಕೋಟೆ ಪಟ್ಟಣದ ಶ್ರೀಸಾಯಿ ಆಸ್ಪತ್ರೆಯಲ್ಲಿಯೇ ವೈದ್ಯ ರಾಜಶೇಖರ್ ಆತ್ಮಹತ್ಯೆ ಮಾಡಿಕೊಂಡಿದ್ದಾರೆ.
ವೈದ್ಯನ ಆತ್ಮಹತ್ಯೆಗೆ ನಿಖರ ಕಾರಣ ತಿಳಿದುಬಂದಿಲ್ಲ. ತಾಳಿಕೋಟೆ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.




