Karnataka NewsLatest

*ಭಾರಿ ಮಳೆ: ಬೆಳಗಾವಿ ಸೇರಿದಂತೆ ಈ ಜಿಲ್ಲೆಗಳಲ್ಲಿ ಅಲರ್ಟ್ ಘೋಷಣೆ*

ಪ್ರಗತಿವಾಹಿನಿ ಸುದ್ದಿ: ರಾಜ್ಯದಲ್ಲಿ ವರುಣಾರ್ಭಟ ಮತ್ತೆ ಮುಂದುವರೆದಿದೆ. ಆಗಸ್ಟ್ 6ವರೆಗೆ ಮಳೆಯ ಅಬ್ಬರ ಇರಲಿದೆ ಎಂದು ಹವಾಮಾನ ಇಲಾಖೆ ಮುನ್ಸೂಚನೆ ನೀಡಿದೆ.

ಭಾರಿ ಮಳೆ ಹಿನ್ನೆಲೆಯಲ್ಲಿ ರೆಡ್ ಅಲರ್ಟ್ ಘೋಷಿಸಲಾಗಿದೆ. ಉಡುಪಿ, ಉತ್ತರ ಕನ್ನಡ, ಕೊಡಗು ಜಿಲ್ಲೆಗಳಲ್ಲಿಇ ಆರೇಂಜ್ ಅಲರ್ಟ್ ಘೋಷಿಸಲಾಗಿದೆ. ಶಿವಮೊಗ್ಗ, ಚಿಇಕ್ಕಮಗಳೂರು, ಬೆಳಗಾವಿ ಜಿಲ್ಲೆಗಳಲ್ಲಿ ಯೆಲ್ಲೋ ಅಲರ್ಟ್ ಘೋಷಿಸಲಾಗಿದೆ.

Home add -Advt

ಧಾರವಾಡ, ಬೀದರ್, ಹಾವೇರಿ, ಗದಗ, ಕೊಪ್ಪಳ, ಕಲಬುರ್ಗಿ, ರಾಯಚೂರು, ಯಾದಗಿರಿ, ವಿಇಜಯಪುರ, ವಿಜಯನಗರ, ಬಾಗಲಕೋಟೆ, ಬೆಂಗಳೂರು ಗ್ರಾಮಾಂತರ, ಬೆಂಗಳೂರು ನಗರ, ದಾವಣಗೆರೆ, ತುಮಕೂರು, ಚಿಕ್ಕಬಳ್ಳಾಪುರ, ಮೈಸೂರು, ಮಂಡ್ಯ, ರಾಮನಗರ, ಹಾಸನ, ಚಾಮರಾಜನಗರ, ಚಿತ್ರದುರ್ಗ, ಕೊಲಾರ ಜಿಲ್ಲೆಗಳಲ್ಲಿಯೂ ಮಳೆಯಾಗಲಿದೆ.

ಈಗಾಗಲೇ ರಾಜ್ಯದಲ್ಲಿ ಅತಿವೃಷ್ಟಿಯಿಂದಾಗಿ ಅನಾಹುತಗಳು ಸಂಭವಿಸಿದ್ದು, ಈ ನಡುವೆ ಇನ್ನೂ 6 ದಿನಗಳ ಕಾಲ ಮಳೆ ಮುಂದುವರೆಯಲಿದೆ ಎಂದು ಹವಾಮಾನ ಇಲಾಖೆ ತಿಳಿಸಿದೆ.

Related Articles

Back to top button