Karnataka NewsLatest

*ಮತ್ತೆ ಆರಂಭವಾಗಲಿದೆ ವರುಣಾರ್ಭಟ; ಈ ಜಿಲ್ಲೆಗಳಲ್ಲಿ ಅಲರ್ಟ್ ಘೋಷಣೆ*

ಪ್ರಗತಿವಾಹಿನಿ ಸುದ್ದಿ: ರಾಜ್ಯಾದ್ಯಂತ ಮಳೆಯ ಅಬ್ಬರ ಕಳೆದ ಕೆಲ ದಿನಗಳಿಂದ ಕಡಿಮೆಯಾಗಿದೆ. ಆದರೆ ಮತ್ತೆ ಮಳೆ ಆರಂಭವಾಗಲಿದ್ದು, ಕರಾವಳಿ, ಮಲೆನಾಡು, ದಕ್ಷಿಣ ಒಳನಾಡಿನ ಜಿಲ್ಲೆಗಳಲ್ಲಿ ಭಾರಿ ಮಳೆಯಾಗಲಿದೆ ಎಂದು ಹವಾಮಾನ ಇಲಾಖೆ ಮುನ್ಸೂಚನೆ ನೀಡಿದೆ.

ಕರಾವಳಿ ಹಾಗೂ ಮಲೆನಾಡು ಭಾಗದಲ್ಲಿ ಮುಂದಿನ ಒಂದು ವಾರಗಳ ಕಾಲ ಮಳೆಯಾಗುವ ಸಾಧ್ಯತೆ ಇದೆ. ದಕ್ಷಿಣ ಕನ್ನಡ, ಉಡುಪಿ, ಕೊಡಗು, ಹಾಸನ ಜಿಲ್ಲೆಗಳಲ್ಲಿ ಭಾರಿ ಮಳೆಯಾಗಲಿದ್ದು, ಆರೇಂಜ್ ಅಲರ್ಟ್ ಘೋಷಿಸಲಾಗಿದೆ.

Home add -Advt

ಶಿವಮೊಗ್ಗ, ಉತ್ತರ ಕನ್ನಡ, ಚಿಕ್ಕಮಗಳೂರು, ತುಮಕೂರು, ಮೈಸೂರು, ಮಂಡ್ಯ, ಚಿತ್ರದುರ್ಗ, ಬೆಂಗಳೂರು ಗ್ರಾಮಾಂತರ, ಬೆಂಗಳೂರು ನಗರ, ಹಾವೇರಿ, ಗದಗ, ಧಾರವಾಡ ಜಿಲ್ಲೆಯಲ್ಲಿ ಯೆಲ್ಲೋ ಅಲರ್ಟ್ ಘೋಷಿಸಲಾಗಿದೆ.

ಬೆಳಗಾವಿ, ಬೀದರ್, ಬಾಗಲಕೋಟೆ, ಕಲಬುರ್ಗಿ, ಕೊಪ್ಪಳ, ರಾಯಚೂರು, ವಿಜಯಪುರ, ಯಾದಗಿರಿ, ವಿಜಯನಗರ, ಕೋಲಾರ ಜಿಲ್ಲೆಗಳಲ್ಲಿಯೂ ಮಳೆಯಾಗಲಿದೆ ಎಂದು ಹವಾಮಾನ ಇಲಾಖೆ ತಿಳಿಸಿದೆ.

Related Articles

Back to top button