Karnataka NewsLatest

*ಈ ಜಿಲ್ಲೆಗಳಲ್ಲಿ ಭಾರಿ ಮಳೆ ಮುನ್ಸೂಚನೆ: ಅಲರ್ಟ್ ಘೋಷಣೆ*

ಪ್ರಗತಿವಾಹಿನಿ ಸುದ್ದಿ: ರಾಜ್ಯದಲ್ಲಿ ಮುಂಗಾರು ಅಬ್ಬರ ಮತ್ತೆ ಚುರುಕಾಗಿದ್ದು, ಹಲವು ಜಿಲ್ಲೆಗಳಲ್ಲಿ ಧಾರಾಕಾರ ಮಳೆಯಾಗುತ್ತಿದೆ. ಈ ನಡುವೆ ಕರಾವಳಿ ಜಿಲ್ಲೆ ಸೇರಿದಂತೆ ವಿವಿಧೆಡೆ ಒಂದು ವಾರಗಳ ಕಾಲ ಭಾರಿ ಮಳೆಯಾಗಲಿದೆ ಎಂದು ಹವಾಮಾನ ಇಲಾಖೆ ಮುನ್ಸೂಚನೆ ನೀಡಿದೆ.

ದಕ್ಷಿಣ ಕನ್ನಡ, ಉತ್ತರ ಕನ್ನಡ, ಉಡುಪಿ, ಚಿಕ್ಕಮಗಳೂರು, ಶಿವಮೊಗ್ಗ ಜಿಲ್ಲೆಗಳಲ್ಲಿ ವ್ಯಾಪಕ ಮಳೆಯಾಗಲಿದೆ. ಈ ಹಿನ್ನೆಲೆಯಲ್ಲಿ ಯೆಲ್ಲೋ ಅಲರ್ಟ್ ಘೋಷಿಸಲಾಗಿದೆ.

Home add -Advt

ರಾಮನಗರ, ಮಂಡ್ಯ, ಮೈಸೂರು, ಕೋಲಾರ, ಕೊಡಗು, ಹಾಸನ, ತುಮಕೂರು, ಚಿತ್ರದುರ್ಗ, ದಾವಣಗೆರೆ, ಚಿಕ್ಕಬಳ್ಳಾಪುರ, ಚಾಮರಾಜನಗರ, ಬೆಂಗಳೂರು ಗ್ರಾಮಾಂತರ, ಬೆಂಗಳೂರು ನಗರ, ಯಾದಗಿರಿ, ವಿಜಯಪುರ, ವಿಜಯನಗರ, ರಾಯಚೂರು, ಕೊಪ್ಪಳ, ಕಲಬುರ್ಗಿ, ಹಾವೇರಿ, ಗದಗ, ಧಾರವಾಡ, ಬೆಳಗಾವಿ, ಬೀದರ್, ಬಾಗಲಕೋಟೆ ಜಿಲ್ಲೆಗಳಲ್ಲಿಯೂ ಮಳೆಯಾಗಲಿದೆ ಎಂದು ತಿಳಿಸಿದೆ.

Related Articles

Back to top button