Karnataka News

*ಬಿರುಗಾಳಿ ಸಹಿತ ಭಾರಿ ಮಳೆ ಮುನ್ಸೂಚನೆ*

ಪ್ರಗತಿವಾಹಿನಿ ಸುದ್ದಿ: ರಾಜ್ಯದ ಹಲವು ಜಿಲ್ಲೆಗಳಲ್ಲಿ ಬಿರುಗಳಿ ಸಹಿತ ಭಾರಿ ಮಳೆಯಾಗಲಿದೆ ಎಂದು ಹವಾಮಾನ ಇಲಾಖೆ ಮುನ್ಸೂಚನೆ ನೀಡಿದೆ.

Home add -Advt

ಉಡುಪಿ, ದಕ್ಷಿಣ ಕನ್ನಡ, ಉತ್ತರ ಕನ್ನಡ, ಚಿಕ್ಕಮಗಳೂರು, ಶಿವಮೊಗ್ಗ ಜಿಲ್ಲೆಗಳಲ್ಲಿ ಬಿರುಗಾಳಿ ಮಳೆಯಾಗಲಿದ್ದು, ಕೆಲವೆಡೆ ಹಗುರದಿಂದ ಸಾಧಾರಣ ಮಳೆಯಾಗಲಿದೆ. ಉತ್ತರ ಒಳನಾಡಿನ ಹಲವೆಡೆ ಸಾಧಾರಣ ಮಳೆಯಾಗಲಿದೆ. ಆದರೆ ಗಾಳಿಯ ವೇಗ ಗಂಟೆಗೆ 40-50 ಕಿ.ಮೀವರೆಗೆ ಬೀಸಲಿದೆ.

ಬೆಳಗಾವಿಯಲ್ಲಿ ಭಾರಿ ಮಳೆ ಸಾಧ್ಯತೆಯಿದೆ. ದಕ್ಷಿಣ ಒಳನಾಡಿನ ಜಿಲ್ಲೆಗಳಲ್ಲಿ ಹಗುರ ಮಳೆಯಾಗಲಿದೆ. ಬೆಂಗಳೂರು ನಗರ ಹಾಗೂ ಸುತ್ತಮುತ್ತ ಮೋಡಕವಿದ ವಾತಾವರಣ, ಅಲ್ಲಲ್ಲಿ ಮಳೆಯಾಗುವ ಸಾಧ್ಯತೆ ಇದೆ.


Related Articles

Back to top button