Latest

*ಭಾರಿ ಮಳೆ; ಹವಾಮಾನ ಇಲಾಖೆಯಿಂದ ಅಲರ್ಟ್ ಘೋಷಣೆ*

ಪ್ರಗತಿವಾಹಿನಿ ಸುದ್ದಿ; ಬೆಂಗಳೂರು: ಒಂದೆಡೆ ವಿಧಾನಸಭಾ ಚುನಾವಣೆ ಅಖಾಡ ಕಾವೇರುತ್ತಿದ್ದರೆ ಇನ್ನೊಂದೆಡೆ ರಾಜ್ಯದ ಹಲವೆಡೆ ಮಳೆಯ ಅಬ್ಬರ ಜೋರಾಗುತ್ತಿದೆ. ರಾಜ್ಯ ರಾಜಧಾನಿ ಬೆಂಗಳೂರು ಸೇರಿದಂತೆ ವಿವಿಧೆಡೆ ಭಾರಿ ಮಳೆಯಾಗುತ್ತಿದೆ.

ಬೆಂಗಳೂರು ಹಾಗೂ ಸುತ್ತಮುತ್ತಲು ಇನ್ನೂ ಐದು ದಿನಗಳ ಕಾಲ ಮಳೆ ಮುಂದುವರೆಯಲಿದೆ ಎಂದು ಹವಾಮಾನ ಇಲಾಖೆ ಮುನ್ಸೂಚನೆ ನೀಡಿದೆ.

Home add -Advt

ದಕ್ಷಿಣ ಣ ಒಳನಾಡು, ಉತ್ತರ ಒಳನಾಡಿನ ಹಲವು ಜಿಲ್ಲೆಗಳು ಹಾಗೂ ಕರಾವಳಿ ಜಿಲ್ಲೆಗಳಲ್ಲಿ ಭಾರಿ ಮಳೆಯಾಗುವ ಸಾಧ್ಯತೆ ಇದ್ದು, ಅಲರ್ಟ್ ಘೋಷಿಸಲಾಗಿದೆ.

ದಕ್ಷಿಣ ಒಳನಾಡಿನ ಬೆಂಗಳೂರು ನಗರ, ಬೆಂಗಳೂರು ಗ್ರಾಮಾಂತರ, ಚಿಕ್ಕಬಳ್ಳಾಪುರ, ರಾಮನಗರ, ಮಂಡ್ಯ, ಮೈಸೂರು, ಕೊಡಗು, ಹಾಸನ, ಚಿಕ್ಕ ಮಗಳೂರು ಜಿಲ್ಲೆಗಳಲ್ಲಿ ವ್ಯಾಪಕ ಮಳೆಯಾಗುವ ಸಾಧ್ಯತೆ ಇದೆ.

ಇನ್ನು ಉತ್ತರ ಒಳನಾಡಿನ ಬೀದರ್, ಬಾಗಲಕೋಟೆ, ಗದಗ, ಕಲಬುರ್ಗಿ, ಕೊಪ್ಪಳ, ರಾಯಚೂರು ಜಿಲ್ಲೆಗಳಲ್ಲಿ ಮಳೆಯಾಗಲಿದೆ ಎಂದು ತಿಳಿಸಿದೆ.

https://pragati.taskdun.com/sonia-gandhihublivisitjagadish-shettar/


Related Articles

Back to top button