Karnataka NewsLatest

*17 ಜಿಲ್ಲೆಗಳಲ್ಲಿ ಭಾರಿ ಮಳೆ: ಬೆಳಗಾವಿ ಸೇರಿದಂತೆ ಹಲವೆಡೆ ಅಲರ್ಟ್ ಘೋಷಣೆ*

ಪ್ರಗತಿವಾಹಿನಿ ಸುದ್ದಿ: ರಾಜ್ಯದಲ್ಲಿ ಮತ್ತೆ ಮಳೆ ಅಬ್ಬರ ಜೋರಾಗಿದ್ದು, 17 ಜಿಲ್ಲೆಗಳಲ್ಲಿ ಧಾರಾಕಾರ ಮಳೆಯಾಗಲಿದೆ ಎಂದು ಹವಾಮಾನ ಇಲಾಖೆ ಮುನ್ಸೂಚನೆ ನೀಡಿದೆ.

Home add -Advt

ಮುಂದಿನ ಮೂರು ದಿನಗಳಲ್ಲಿ 17 ಜಿಲ್ಲೆಗಳಲ್ಲಿ ಭಾರಿ ಮಳೆಯಾಗಲಿದೆ. ಉತ್ತರ ಕನ್ನಡ, ದಕ್ಷಿಣ ಕನ್ನಡ, ಉಡುಪಿ, ಜಿಲ್ಲೆಗಳಲ್ಲಿ ಅತಿ ಹೆಚ್ಚು ಮಳೆಯಾಗಲಿದ್ದು ರೆಡ್ ಅಲರ್ಟ್ ಘೋಷಿಸಲಾಗಿದೆ.

ಕಲಬುರಗಿ, ಬೀದರ್, ಯಾದಗಿರಿ ಜಿಲ್ಲೆಗಳಲ್ಲಿ ಭಾರಿ ಮಳೆಯಗಲಿದ್ದು, ಆರೇಂಜ್ ಅಲರ್ಟ್ ಘೋಷಿಸಲಾಗಿದೆ. ಬೆಳಗಾವಿ, ಧಾರವಾಡ, ಗದಗ, ಹಾವೇರಿ, ವಿಜಯಪುರ, ಚಿಕ್ಕಮಗಳೂರು, ಹಾಸನ, ಕೊಡಗು, ಶಿವಮೊಗ್ಗ, ತುಮಕೂರು ಜಿಲ್ಲೆಗಳಲ್ಲಿ ಯೆಲ್ಲೋ ಅಲರ್ಟ್ ಘೋಷಿಸಲಾಗಿದೆ.

ರಾಯಚೂರು, ಕೊಪ್ಪಳ, ಬಳ್ಳಾರಿ, ಬೆಂಗಳೂರು ಗ್ರಾಮಾಂತರ, ಬೆಂಗಳೂರು ನಗರ, ಚಾಮರಾಜನಗರ, ಚಿಕ್ಕಬಳ್ಳಾಪುರ, ಮಂಡ್ಯ, ಮೈಸೂರು, ರಾಮನಗರ, ವಿಜಯನಗರ ಜಿಲ್ಲೆಗಳಲ್ಲಿಯೂ ಮಳೆಯಾಗಲಿದೆ.


Related Articles

Back to top button