
ಪ್ರಗತಿವಾಹಿನಿ ಸುದ್ದಿ, ಬೆಳಗಾವಿ: ಯಾವುದೇ ದಾಖಲೆಗಳಿಲ್ಲದೆ ಸಾಗಾಟವಾಗುತ್ತಿದ್ದ ಸೀರೆಗಳನ್ನು ನಿಪ್ಪಾಣಿ ತಾಲೂಕಿನ ಕೊಗನೊಳ್ಳಿ ಚೆಕ್ ಪೋಸ್ಟ್ ನಲ್ಲಿ ವಶಪಡಿಸಿಕೊಳ್ಳಲಾಗಿದೆ.
73 ಸಾವಿರ ರೂ. ಮೌಲ್ಯದ 300 ಸೀರೆಗಳನ್ನು ವಾಹನದಲ್ಲಿ ಸಾಗಾಟ ಮಾಡಲಾಗುತ್ತಿತ್ತು. ಚುನಾವಣೆ ಕರ್ತವ್ಯದಲ್ಲಿರುವ ಚೆಕ್ ಪೋಸ್ಟ್ ಸಿಬ್ಬಂದಿ ವಾಹನ ತಡೆದು ತಪಾಸಣೆ ನಡೆಸಿದಾಗ ಸೀರೆಗಳು ಪತ್ತೆಯಾಗಿವೆ.
ಇವುಗಳನ್ನು ಚುನಾವಣೆಯಲ್ಲಿ ಮತದಾರರಿಗೆ ಆಮಿಷ ರೂಪದಲ್ಲಿ ಹಂಚಿಕೆ ಮಾಡಲು ತರಲಾಗುತ್ತಿರುವ ಸಂದೇಹವಿದ್ದು ಈ ಕುರಿತು ಪ್ರಕರಣ ದಾಖಲಿಸಿಕೊಂಡು ತನಿಖೆ ಮುಂದುವರಿಸಲಾಗುತ್ತಿದೆ.