Kannada NewsKarnataka NewsLatest

*ಮತ್ತೆ ಮುಂಗಾರು ಚುರುಕು; ಹಲವು ಜಿಲ್ಲೆಗಳಲ್ಲಿ ಭಾರಿ ಮಳೆ ಎಚ್ಚರಿಕೆ*

ಪ್ರಗತಿವಾಹಿನಿ ಸುದ್ದಿ; ಬೆಂಗಳೂರು: ರಾಜ್ಯದಲ್ಲಿ ಇಂದಿನಿಂದ ಮತ್ತೆ ಮುಂಗಾರು ಚುರುಕಾಗಿದ್ದು, ಹಲವೆಡೆ ಭಾರಿ ಮಳೆಯಾಗುವ ಸಾಧ್ಯತೆ ಇದೆ ಎಂದು ಹವಾಮಾನ ಇಲಾಖೆ ಮುನ್ಸೂಚನೆ ನೀಡಿದೆ.

ಕರಾವಳಿ ಜಿಲ್ಲೆಗಳು, ದಕ್ಷಿಣ ಒಳನಾಡು ಹಾಗೂ ಉತ್ತರ ಒಳನಾಡಿನ ಹಲವು ಜಿಲ್ಲೆಗಳಲ್ಲಿ ಧಾರಾಕಾರ ಮಳೆಯಾಗುವ ಸಾಧ್ಯತೆ ಇದೆ. ಉತ್ತರ ಕನ್ನಡ, ದಕ್ಷಿಣ ಕನ್ನಡ, ಉಡುಪಿ ಜಿಲ್ಲೆಗಳಲ್ಲಿ ಹೆಚ್ಚು ಮಳೆಯಾಗಲಿದೆ.

Home add -Advt

ಬೆಳಗಾವಿ, ಬೀದರ್, ಬಾಗಲಕೋಟೆ, ಬಳ್ಳಾರಿ, ಧಾರವಾಡ, ಹಾವೇರಿ, ಕಲಬುರ್ಗಿ, ವಿಜಯಪುರ, ಬೆಂಗಳೂರು ನಗರ, ಬೆಂಗಳೂರು ಗ್ರಾಮಾಂತರ, ಚಿಕ್ಕಮಗಳೂರು, ಶಿವಮೊಗ್ಗ, ಕೊಡಗು, ದಾವಣಗೆರೆ ಜಿಲ್ಲೆಗಳಲ್ಲಿ ಮಳೆಯಾಗಲಿದೆ.

ಬೆಂಗಳೂರಿನ ಕೆಲವೆಡೆಗಳಲ್ಲಿ ಮುಂಜಾನೆ ತುಂತುರು ಮಳೆಯಾಗಿದ್ದು, ಮೋಡಕವಿದ ವಾತಾವರಣವಿದೆ. ಕರಾವಳಿ ಜಿಲ್ಲೆಗಳಲ್ಲಿ ಇಂದಿನಿಂದ ಬಿರುಗಾಳಿ ಸಹಿತ ಭಾರಿ ಮಳೆಯಾಗುವ ಸಾಧ್ಯತೆ ಇದೆ.

Related Articles

Back to top button