ಪ್ರಗತಿವಾಹಿನಿ ಸುದ್ದಿ; ಬೆಂಗಳೂರು: ರಾಜ್ಯದಲ್ಲಿ ಮತ್ತೆ ಮುಂಗಾರು ಚುರುಕುಗೊಂಡಿದ್ದು, ಹಲವು ಜಿಲ್ಲೆಗಳಲ್ಲಿ ಮಳೆಯಾಗುತ್ತಿದೆ. ಕರ್ನಾಟಕದ ಬಹುತೇಕ ಜಿಲ್ಲೆಗಳಲ್ಲಿ ಆಗಸ್ಟ್ 20ರವರೆಗೆ ಧಾರಾಕಾರ ಮಳೆಯಗಲಿದೆ ಎಂದು ಹವಾಮಾನ ಇಲಾಖೆ ತಿಳಿಸಿದೆ.
ಕರಾವಳಿ ಜಿಲ್ಲೆಗಳು, ದಕ್ಷಿಣ ಒಳನಾದು, ಉತ್ತರ ಒಳನಾಡಿನ ಬಹುತೇಕ ಜಿಲ್ಲೆಗಳಲ್ಲಿ ಮಳೆಯಾಗಲಿದೆ. ಉತ್ತರ ಕನ್ನಡ, ದಕ್ಷಿಣ ಕನ್ನಡ, ಉಡುಪಿ, ಬೆಂಗಳೂರು ನಗರ, ಬೆಂಗಳೂರು ಗ್ರಾಮಾಂತರ, ರಾಮನಗರ, ಮಂಡ್ಯ, ಮೈಸೂರು, ಹಾಸನ, ಕೊಡಗು, ಚಿಕ್ಕಮಗಳೂರು, ದಾವಣಗೆರೆ, ಶಿವಮೊಗ್ಗ, ಚಿತ್ರದುರ್ಗ ಜಿಲ್ಲೆಗಳಲ್ಲಿ ಧಾರಾಕಾರ ಮಳೆಯಾಗಲಿದೆ.
ಬೆಳಗಾವಿ, ಬೀದರ್, ಬಾಗಲಕೋಟೆ, ಬಳ್ಳಾರಿ, ಧಾರವಾಡ, ಗದಗ, ಕೊಪ್ಪಳ, ವಿಜಯನಗರ ಜಿಲ್ಲೆಗಳಲ್ಲಿಯೂ ಮಳೆಯಾಗಲಿದೆ.
ಭಾರತೀಯ ಹವಾಮಾನ ಇಲಾಖೆ ನೀಡಿದ ಮಾಹಿತಿ ಪ್ರಕಾರ ಹಿಮಾಚಲ ಪ್ರದೇಶ, ಉತ್ತರಾಖಂಡ, ಬಿಹಾರ, ಪಶ್ಚಿಮ ಬಂಗಾಳ ಸೇರಿದಂತೆ ದೇಶದ ವಿವಿಧ ರಾಜ್ಯಗಳಲ್ಲಿ ಮಳೆ ಮುನ್ಸೂಚನೆ ಇದೆ ಎಂದು ತಿಳಿಸಿದೆ.
ಪ್ರಗತಿವಾಹಿನಿ ಸುದ್ದಿಗಳನ್ನು ನಿಮ್ಮ ಸ್ನೇಹಿತರಿಗೆ, ಬೇರೆ ಗ್ರುಪ್ ಗಳಿಗೆ ಶೇರ್ ಮಾಡಿ