Karnataka NewsLatest

*ಗುಡುಗು ಸಹಿತ ಭಾರಿ ಮಳೆ ಎಚ್ಚರಿಕೆ: ಅಲರ್ಟ್ ಘೋಷಣೆ*

ಪ್ರಗತಿವಾಹಿನಿ ಸುದ್ದಿ: ರಾಜ್ಯದ ಬಹುತೇಕ ಜಿಲ್ಲೆಗಳಲ್ಲಿ ಇಂದು ಭಾರಿ ಮಳೆಯಾಗಲಿದ್ದು, ಯೆಲ್ಲೋ ಅಲರ್ಟ್, ಆರೇಂಜ್ ಅಲರ್ಟ್ ಘೋಷಿಸಲಾಗಿದೆ್ ಎಂದು ಹವಾಮಾನ ಇಲಾಖೆ ತಿಳಿಸಿದೆ.

Home add -Advt

ಕಳೆದ ಮೂರ್ನಾಲ್ಕು ದಿನಗಳಿಂದ ರಾಜ್ಯದ ಕೆಲ ಜಿಲ್ಲೆಗಳಲ್ಲಿ ಬಿರುಗಾಳಿ ಸಹಿತ ಧಾರಾಕಾರ ಮಳೆಯಾಗುತ್ತಿದೆ. ಆದರೆ ಇನ್ನೂ ಹಲವು ಜಿಲ್ಲೆಗಳಲ್ಲಿ ಮಳೆಯ ಸುಳಿವಿಲ್ಲ. ಆದರೆ ಇಂದು ಬಹುತೇಕ ಜಿಲ್ಲೆಗಳಲ್ಲಿ ಅತ್ಯಧಿಕ ಮಳೆಯಾಗಲಿದೆ.

ಉತ್ತರ ಕನ್ನಡ, ದಕ್ಷಿಣ ಕನ್ನಡ, ಉಡುಪಿ ಜಿಲ್ಲೆಗಳಲ್ಲಿ ಧಾರಾಕಾರ ಮಳೆಯಾಗಲಿದ್ದು ಯೆಲ್ಲೋ ಅಲರ್ಟ್ ಘೋಷಿಸಲಾಗಿದೆ. ಬೆಳಗಾವಿ, ಬೀದರ್, ಬಾಗಲಕೊಟೆ, ಧಾರವಡ, ಗದಗ, ಹಾವೇರಿ, ಕಲಬುರ್ಗಿ, ಕೊಪ್ಪಳ, ರಾಯಚೂರು, ವಿಜಯಪುರ, ಯಾದಗಿರಿ ಜಿಲ್ಲೆಗಳಲ್ಲಿ ಆರೇಂಜ್ ಅಲರ್ಟ್ ಘೋಷಿಸಲಾಗಿದೆ.

ಬೆಂಗಳೂರು ನಗರ, ಬೆಂಗಳೂರು ಗ್ರಾಮಾಂತರ, ಚಿಕ್ಕಬಳ್ಳಾಪುರ, ಚಿಕ್ಕಮಗಳೂರು, ಹಾಸನ, ಕೊಡಗು, ಚಿತ್ರದುರ್ಗ, ದಾವಣಗೆರೆ, ಶಿವಮೊಗ್ಗ, ತುಮಕೂಋ, , ವಿಜಯನಗರ ಜಿಲ್ಲೆಗಳಲ್ಲಿ ಆರೇಂಜ್ ಹಾಗೂ ಯೆಲ್ಲೋ ಅಲರ್ಟ್ ಘೋಷಿಸಲಾಗಿದೆ.

ಬೆಂಗಳೂರಿನಲ್ಲಿ ಬೆಳಿಗ್ಗೆಯಿಂದ ಮೋಡಕವಿದ ವಾತಾವರಣವಿದ್ದು, ಸಂಜೆ ವೇಳೆಗೆ ಗುಡುಗು ಸಹಿತ ಭಾರಿ ಮಳೆಯಾಗುವ ನಿರೀಕ್ಷೆ ಇದೆ.

Related Articles

Back to top button