ಪ್ರಗತಿವಾಹಿನಿ ಸುದ್ದಿ, ಬೆಳಗಾವಿ
ವಿಶ್ವೇಶ್ವರಯ್ಯ ತಾಂತ್ರಿಕ ವಿಶ್ವವಿದ್ಯಾಲಯ ವಿಭಜನೆ ನಿರ್ಧಾರದ ಹಿನ್ನೆಲೆಯಲ್ಲಿ ಮಂಗಳವಾರ ಬೆಂಗಳೂರಿನಲ್ಲಿ ಉತ್ತರ ಕರ್ನಾಟಕ ಭಾಗದ ಸಚಿವರು, ಶಾಸಕರ ಸಭೆ ನಡೆಯಿತು.
ಸಚಿವ ಎಂ.ಬಿ.ಪಾಟೀಲ ಕಚೇರಿಯಲ್ಲಿ ಸಚಿವರಾದ ಸತೀಶ್ ಜಾರಕಿಹೊಳಿ, ಶಿವಾನಂದ ಪಾಟೀಲ, ಮನಗೂಳಿ, ಮಾಜಿ ಸಚಿವ ಬಸವರಾಜ ಹೊರಟ್ಟಿ, ಶಾಸಕರಾದ ಅಭಯ ಪಾಟೀಲ, ಅನಿಲ ಬೆನಕೆ ಮೊದಲಾದವರು ಸೇರಿ ಚರ್ಚಿಸಿದರು.
ವಿಟಿಯು ವಿಭಜನೆಯನ್ನು ಎಲ್ಲರೂ ಒಕ್ಕೊರಲಿನಿಂದ ವಿರೋಧಿಸಿದ್ದು, ಮುಖ್ಯಮಂತ್ರಿಗಳನ್ನು ಭೇಟಿಯಾಗಿ ವಿಭಜನೆ ರದ್ಧತಿಗೆ ಮನವಿ ಸಲ್ಲಿಸಲು ನಿರ್ಧರಿಸಲಾಗಿದೆ ಎಂದು ಗೊತ್ತಾಗಿದೆ.
ಬುಧವಾರ ಕುಮಾರಸ್ವಾಮಿ ಅವರನ್ನು ಭೇಟಿಯಾಗುವ ಸಾಧ್ಯತೆ ಇದೆ.