ಪ್ರಗತಿವಾಹಿನಿ ಸುದ್ದಿ; ಬೆಂಗಳೂರು: ದಕ್ಷಿಣ ಒಳನಾಡಿನ ಜಿಲ್ಲೆಗಳಲ್ಲಿ ಗುಡುಸಹಿತ ಭಾರು ಮಳೆಯಾಗಲಿದೆ ಎಂದು ಹವಾಮಾನ ಇಲಾಖೆ ಮುನ್ಸೂಚನೆ ನೀಡಿದೆ.
ಜೂನ್ 11ರಂದು ದಕ್ಷಿಣ ಒಳನಾಡಿನ ಜಿಲ್ಲೆಗಳಲ್ಲಿ ಬಿರುಗಾಳಿ, ಗುಡುಗು ಸಹಿತ ಮಳೆಯಾಗಲಿದೆ. ಬಳ್ಳಾರಿ, ಚಿಕ್ಕಮಗಳೂರು, ಚಿಕ್ಕಬಳ್ಳಾಪುರ, ಕೊಡಗು, ಕೋಲಾರ, ತುಮಕೂರು ಜಿಲ್ಲೆಗಳಲ್ಲಿ ಅತ್ಯಧಿಕ ಮಳೆಯಾಗಲಿದೆ.
ಕರಾವಳಿ ಜಿಲ್ಲೆಗಳಾದ ದಕ್ಷಿಣ ಕನ್ನಡ, ಉತ್ತರ ಕನ್ನಡ, ಉಡುಪಿ ಜಿಲ್ಲೆಗಳಲ್ಲಿ ಹಾಗು ಉತ್ತರ ಒಳನಾಡಿನ ಬೆಳಗಾವಿ, ಬೀದರ್, ಕಲಬುರ್ಗಿ, ಗದಗ,ರಾಯಚೂರು, ವಿಜಯಪುರ, ಯಾದಗಿರಿ, ಬೆಂಗಳೂರು ನಗರ, ಬೆಂಗಳೂರು ಗ್ರಾಮಾಂತರ, ಚಾಮರಾಜನಗರ ಹಾಗೂ ಶಿವಮೊಗ್ಗ, ಮಂಡ್ಯ, ಮೈಸೂರು ಜಿಲ್ಲೆಗಳಲ್ಲಿಯೂ ಭಾರಿ ಮಳೆಯಾಗಲಿದೆ ಎಂದು ಹವಾಮಾನ ಇಲಾಖೆ ತಿಳಿಸಿದೆ.
ಈ ನಡುವೆ ಕರಾವಳಿ ಜಿಲ್ಲೆಗಳಲ್ಲಿ ಚಂಡಮಾರುತ ಮುನ್ಸೂಚನೆ ನೀಡಲಾಗಿದ್ದು, ಮುಂದಿನ ಮೂರು ದಿನಗಳಲ್ಲಿ ಬಿರುಗಾಳಿ ಮಳೆಯಾಗಲಿದೆ. ಮೀನುಗಾರರು, ಸಾರ್ವಜನಿಕರು ಸಮುದ್ರ, ನದಿಗಳಿಗೆ ಇಳಿಯದಂತೆ ಕಟ್ಟೆಚ್ಚರಕ್ಕೆ ಸೂಚಿಸಲಾಗಿದೆ.
https://pragati.taskdun.com/employment-creation-promotion-of-industrial-development-chief-minister-siddaramaiah/
ಪ್ರಗತಿವಾಹಿನಿ ಸುದ್ದಿಗಳನ್ನು ನಿಮ್ಮ ಸ್ನೇಹಿತರಿಗೆ, ಬೇರೆ ಗ್ರುಪ್ ಗಳಿಗೆ ಶೇರ್ ಮಾಡಿ