
ಪ್ರಗತಿವಾಹಿನಿ ಸುದ್ದಿ: ಮಾರ್ಚ್ 22ರಂದು ಕರೆ ನೀಡಿದ್ದ ಅಖಂಡ ಕರ್ನಾಟಕ ಬಂದ್‌ಗೆ ಇದೀಗ ಬೆಂಗಳೂರಿನಲ್ಲಿ ಆಟೋ ಚಾಲಕರ ಸಂಘಟನೆ ಕೂಡ ಬೆಂಬಲ ನೀಡಿದೆ.
ಈ ಕುರಿತು ಆಟೋ ಚಾಲಕರ ಸಂಘಟನೆ ಅಧ್ಯಕ್ಷ ಶ್ರೀನಿವಾಸ್ ಪ್ರತಿಕ್ರಿಯಿಸಿ, ಎಲ್ಲಾ ಆಟೋ ರಿಕ್ಷಾದವರು ಮಾರ್ಚ್ 22 ರಂದು ಅಖಂಡ ಕರ್ನಾಟಕ ಬಂದ್‌ಗೆ ಬೆಂಬಲ ಕೊಡುತ್ತೇವೆ. ಬೆಳಗಾವಿಯಲ್ಲಿ ಕಂಡಕ್ಟರ್ ಮೇಲೆ ನಡೆಸಿದ ಹಲ್ಲೆಯನ್ನು ಖಂಡಿಸಿ ಮಾರ್ಚ್ 22ರಂದು ನಡೆಯುವ ಬಂದ್ ಗೆ ಬೆಂಬಲ ನೀಡುತ್ತಿದ್ದೇವೆ ಎಂದು ತಿಳಿಸಿದರು.
ಬಂದ್‌ಗೆ ಈಗಾಗಲೇ ಕನ್ನಡಪರ ಹೋರಾಟಗಾರ ವಾಟಾಳ್ ನಾಗರಾಜ್ ಸೇರಿದಂತೆ ಹಲವು ಕನ್ನಡ ಸಂಘಟನೆಗಳು ಬೆಂಬಲ ನೀಡಿವೆ. ಸಾರ್ವಜನಿಕರಿಗೆ ಅಗತ್ಯತೆಗಳನ್ನು ಹೊರತುಪಡಿಸಿ ಉಳಿದೆಲ್ಲವೂ ಅಂದು ಬಂದ್ ಇರಲಿದೆ.