Kannada NewsLatest

ಭಾರಿ ಮಳೆ: ಒಂದೆಡೆ ರಾಷ್ಟ್ರೀಯ ಹೆದ್ದಾರಿ ಕುಸಿತ; ಇನ್ನೊಂದೆ ಪ್ರವಾಹ ಭೀತಿ; ಜನಜೀವನ ಅಸ್ತವ್ಯಸ್ಥ

ಪ್ರಗತಿವಾಹಿನಿ ಸುದ್ದಿ; ಕಾರವಾರ: ಉತ್ತರ ಕರ್ನಾಟಕ, ಮಲೆನಾಡು, ಕರಾವಳಿ ಜಿಲ್ಲೆಗಳಲ್ಲಿ ಭಾರಿ ಮಳೆಯಾಗುತ್ತಿದ್ದು, ಒಂದೆಡೆ ಪ್ರವಾಹ ಭೀತಿ ಎದುರಾಗಿದ್ದರೆ ಇನ್ನೊಂದೆಡೆ ಭೂಕುಸಿತ, ರಸ್ತೆ ಕುಸಿತದಂತಹ ಘಟನೆ ನಡೆಯುತ್ತಿವೆ. ವರುಣನ ಆರ್ಭಟಕ್ಕೆ ಜನಜೀವನ ಸಂಪೂರ್ಣ ಅಸ್ತವ್ಯಸ್ಥಗೊಂಡಿದೆ.

ಕರಾವಳಿ ಜಿಲ್ಲೆಗಳಲ್ಲಿ ಕೃಷಿಭೂಮಿ, ಗದ್ದೆ, ತೋಟಗಳು ಸಂಪೂರ್ಣ ಜಲಾವೃತಗೊಂಡಿದ್ದು, ಮನೆಗಳಿಗೆ ನೀರು ನುಗ್ಗಿದೆ. ದಕ್ಷಿಣ ಕನ್ನಡ, ಉತ್ತರ ಕನ್ನಡ ಜಿಲ್ಲೆಗಳಲ್ಲಿ ಎರಡು ದಿನಗಳ ಕಾಲ ರೆಡ್ ಅಲರ್ಟ್ ಘೋಷಿಸಲಾಗಿದೆ. ಕೊಡಗು, ಚಿಕ್ಕಮಗಳೂರು ಜಿಲ್ಲೆಗಳಲ್ಲಿ ಆರೆಂಜ್ ಅಲರ್ಟ್ ಘೋಷಿಸಲಾಗಿದೆ.

ಭಾರಿ ಮಳೆಯಿಂದಾಗಿ ರಾಣೆಬೆನ್ನೂರು ಬಳಿ ರಾಷ್ಟ್ರೀಯ ಹೆದ್ದಾರಿಯಲ್ಲಿ ಭೂ ಕುಸಿತವಾಗಿದ್ದು ವಾಹನ ಸಂಚಾರ ಸ್ಥಗಿತಗೊಳಿಸಲಾಗಿದೆ. ರಾಷ್ಟ್ರೀಯ ಹೆದ್ದಾರಿ 766ಸಿ ಯಲ್ಲಿ ರಸ್ತೆ ಕುಸಿತವುಂಟಾಗಿದ್ದು, ರಾಣೆಬೆನ್ನೂರು ಮಾರ್ಗದಿಂದ ಶಿಕಾರಿಪುರ, ಹೊಸನಗರ, ಬೈಂದೂರು ಮಾರ್ಗದ ಮೂಲಕ ಹೋಗುವ ವಾಹನಗಳಿಗೆ ಪರ್ಯಾಯ ಮಾರ್ಗ ಸೂಚಿಸಲಾಗಿದೆ. ಹೊಸನಗರ, ಮಾಸ್ತಿಕಟ್ಟೆ, ಸಿದ್ದಾಪುರ ಮಾರ್ಗವಾಗಿ ವಾಹನ ಸಂಚಾರಕ್ಕೆ ಸೂಚಿಸಲಾಗಿದೆ.

ಇನ್ನೊಂದೆಡೆ ಸಕಲೇಶಪುರದ ಪಟ್ಟಣದ ಪ್ರೇಮನಗರದಲ್ಲಿ ಭಾರಿ ಮಳೆಗೆ ತಡೆಗೋಡೆ ಸಮೇತ ರಸ್ತೆ ಕುಸಿತವುಂಟಾಗಿದ್ದು, ಸಂಚಾರ ಸಂಪೂರ್ಣ ಅಸ್ತವ್ಯವಸ್ಥವಾಗಿದೆ. ರಸ್ತೆಯ ಒಂದು ಭಾಗ ಸಂಪೂರ್ಣ ಕುಸಿದಿದೆ ಇದರಿಂದಾಗಿ ಸುತ್ತಮುತ್ತಲಿನ ಹತ್ತಾರು ಮನೆಗಳಿಗೂ ಆತಂಕ ಎದುರಾಗಿದೆ.

ಬೆಳಗಾವಿ, ಬಾಗಲಕೋಟೆ, ಹುಬ್ಬಳ್ಳಿ-ಧಾರವಾಡ ಸೇರಿದಂತೆ ಉತರ ಕರ್ನಾಟಕದ ಜಿಲ್ಲೆಗಳಲ್ಲಿ ಕಳೆದ ಐದು ದಿನಗಳಿಂದ ಎಡೆಬಿಡದೇ ಮಳೆಯಾಗುತ್ತಿದ್ದು, ಘಟಪ್ರಭಾ, ಕೃಷ್ಣಾ ನದಿ ಅಪಾಯದ ಮಟ್ಟ ಮೀರಿ ಹರಿಯುತ್ತಿದ್ದು, ಪ್ರವಾಹ ಭೀತಿ ಎದುರಾಗಿದೆ. ಬೆಳಗಾವಿಯ ಚಿಕ್ಕೋಡಿಯ ವಿಭಾಗದ 7 ಸೇತುವೆಗಳು ಜಲಾವೃತಗೊಂಡಿವೆ. ಕಲ್ಲೋಳ ಗ್ರಾಮದ ದತ್ತ ದೇವಾಲಯ, ಬಂಗಾಲಿ ಬಾಬಾ ದೇವಸ್ಥಾನಗಳು ಜಲಾವೃತಗೊಂಡಿವೆ.
ಬೆಳಗಾವಿಯಲ್ಲಿ ನದಿಯಲ್ಲಿ ಕೊಚ್ಚಿಹೋದ ರೈತ: ಶನಿವಾರವೂ ಭಾರಿ ಮಳೆ ಮುನ್ಸೂಚನೆ

ಪ್ರಗತಿವಾಹಿನಿ ಸುದ್ದಿಗಳನ್ನು ನಿಮ್ಮ ಸ್ನೇಹಿತರಿಗೆ, ಬೇರೆ ಗ್ರುಪ್ ಗಳಿಗೆ ಶೇರ್ ಮಾಡಿ

Related Articles

Back to top button