Karnataka News

*ಈ ಜಿಲ್ಲೆಗಳಲ್ಲಿ ಗುಡುಗು ಸಹಿತ ಭಾರಿ ಮಳೆ: ಹವಾಮಾನ ಇಲಾಖೆ ಎಚ್ಚರಿಕೆ*

ಪ್ರಗತಿವಾಹಿನಿ ಸುದ್ದಿ: ರಾಜ್ಯದಲ್ಲಿ ಬಿರುಬೇಸಿಗೆಯ ಸಂದರ್ಭದಲ್ಲಿ ಭಾರಿ ಮಳೆಯಾಗುತ್ತಿದೆ. ಕೆಲ ಜಿಲ್ಲೆಗಳಲ್ಲಿ ರಣ ಬಿಸಿಲು, ತಾಪಮಾನ ಹೆಚ್ಚಲವಾಗಿದ್ದರೆ, ಇನ್ನು ಹಲವು ಜಿಲ್ಲೆಗಳಲ್ಲಿ ಬಿರುಗಾಳಿ, ಗುಡುಗು ಸಹಿತ ಭಾರಿ ಮಳೆಯಾಗುತ್ತಿದೆ. ಇಂದೂ ಕೂಡ ರಾಜ್ಯದ 18 ಜಿಲ್ಲೆಗಳಲ್ಲಿ ಗುಡುಗು ಸಹಿತ ಭಾರಿ ಮಳೆಯಾಗಲಿದೆ ಎಂದು ಹವಾಮಾನ ಇಲಾಖೆ ಮುನ್ಸೂಚನೆ ನೀಡಿದೆ.

ಈಗಾಗಲೇ ಬೆಂಗಳೂರು ಸೇರಿದಂತೆ ರಾಜ್ಯದ ವಿವಿಧ ಜಿಲ್ಲೆಗಳಲ್ಲಿ ನಿನ್ನೆ ಸುರಿದ ವರುಣಾರ್ಭಟಕ್ಕೆ ಅವಾಮ್ತರಗಳು ಸೃಷ್ಟಿಯಾಗಿವೆ. ಉಡುಪಿ, ಚಿಕ್ಕಮಗಳೂರು, ಕೊಡಗು, ಚಿತ್ರದುರ್ಗ, ಬಳ್ಳಾರಿ ಸೇರಿದಂತೆ ಹಲವು ಜಿಲ್ಲೆಗಳಲ್ಲಿ ಭಾರಿ ಮಳೆಯಿಂದಾಜಿ ಜನಜೀವನ ಅಸ್ತವ್ಯಸ್ಥಗೊಂಡಿದೆ.

Home add -Advt

ಇಂದು ದಕ್ಷಿಣ ಒಳನಾಡು ಹಾಗೂ ಕರಾವಳಿ ಜಿಲ್ಲೆಗಳಲ್ಲಿ ಇಂದು ಭಾರಿ ಮಳೆಯಾಗಲಿದೆ. ದಕ್ಷಿಣ ಕನ್ನಡ, ಉಡುಪಿ, ಚಿಕ್ಕಮಗಳೂರು, ಕೊಡಗು, ಕೋಲಾರ, ಚಾಮರಾಜನಗ, ಮೈಸೂರು, ಮಂಡ್ಯ, ರಾಮನಗರ, ಬೆಂಗಳೂರು ಗ್ರಾಮಾಂತರ, ಬೆಂಗಳೂರು ನಗರ, ತುಮಕೂರು, ಹಾಸನ, ಚಿತ್ರದುರ್ಗ, ಧಾರವಾಡ, ಗದಗ, ಹಾವೇರಿ ಜಿಲ್ಲೆಗಳಲ್ಲಿ ಮಳೆಯಾಗಲಿದೆ.

ಇನ್ನು ರಾಯಚೂರು, ಕೊಪ್ಪಳ, ಕಲಬುರಗಿ, ಬೀದರ್, ಬೆಳಗಾವಿ, ಬಾಗಲಕೋಟೆ, ವಿಜಯನಗರ, ದಾವಣಗೆರೆ, ಬಳ್ಳಾರಿ, ಯಾದಗಿರಿ, ವಿಜಯಪುರ, ಉತ್ತರಕನ್ನಡ, ಶಿವಮೊಗ್ಗ ಜಿಲ್ಲೆಗಳಲ್ಲಿ ಒಣಹವೆ ಮುಂದುವರೆಯಲಿದೆ.

Related Articles

Back to top button