Latest

*ಭಾರಿ ಮಳೆ ಎಚ್ಚರಿಕೆ ನೀಡಿದ ಹವಾಮಾನ ಇಲಾಖೆ*

ಪ್ರಗತಿವಾಹಿನಿ ಸುದ್ದಿ; ಬೆಂಗಳೂರು: ಬಿಪರ್ ಜಾಯ್ ಚಂಡಮಾರುತ ಹಿನ್ನೆಲೆಯಲ್ಲಿ ಕರ್ನಾಟಕದಲ್ಲಿಯೂ ಬಿರುಗಾಳಿ ಸಹಿತ ಭಾರಿ ಮಳೆಯಾಗಲಿದ್ದು, ಅದರಲ್ಲೂ ಪ್ರಮುಖವಾಗಿ ರಾಜ್ಯದ ಕರಾವಳಿ ಜಿಲ್ಲೆಗಳಲ್ಲಿ ಧಾರಾಕಾರ ಮಳೆಯಾಗಲಿದೆ ಎಂದು ಹವಾಮಾನ ಇಲಾಖೆ ಎಚ್ಚರಿಕೆ ನೀಡಿದೆ.

ಕರಾವಳಿ ಜಿಲ್ಲೆಗಳಾದ ದಕ್ಷಿಣ ಕನ್ನಡ, ಉಡುಪಿ, ಉತ್ತರ ಕನ್ನಡ ಜಿಲ್ಲೆಗಳಲ್ಲಿ ಭಾರಿ ಮಳೆಯಾಗುವ ಸಂಭವವಿದೆ. ಉತ್ತರ ಕನ್ನಡ ಜಿಲ್ಲೆಯಲ್ಲಿ ಸಮುದ್ರದಲ್ಲಿ ಆಳೆತ್ತರದವರೆಗೆ ಸಮುದ್ರದ ಅಲೆಗಳು ಏಳಲಿದ್ದು, ಸುಮಾರು 10 ಅಡಿಗೂ ಹೆಚ್ಚು ಎತ್ತರದ ಅಲೆ ಏಳುವ ಬಗ್ಗೆ ವಾರ್ನಿಂಗ್ ನೀಡಲಾಗಿದೆ.

ದಕ್ಷಿಣ ಒಳನಾಡಿನ ಜಿಲ್ಲೆಗಳಲ್ಲಿಯೂ ವ್ಯಾಪಕವಾಗಿ ಮಳೆಯಾಗಲಿದ್ದು, ಕಟ್ಟೆಚ್ಚರ ವಹಿಸುವಂತೆ ಸೂಚಿಸಲಾಗಿದೆ.

Home add -Advt

Related Articles

Back to top button