Uncategorized

*ಚಂಡಮಾರುತ ಹಿನ್ನೆಲೆ; ರಾಜ್ಯದಲ್ಲಿ ಧಾರಾಕಾರ ಮಳೆ ಎಚ್ಚರಿಕೆ*

ಪ್ರಗತಿವಾಹಿನಿ ಸುದ್ದಿ; ಬೆಂಗಳೂರು: ಮೋಕಾ ಚಂಡಮಾರುತ ಹಿನ್ನೆಲೆಯಲ್ಲಿ ಕರ್ನಾಟಕ, ತಮಿಳುನಾಡು, ಆಂದ್ರಪ್ರದೇಶ ಸೇರಿದಂತೆ ಹಲವು ರಾಜ್ಯಗಳಲ್ಲಿ ಭಾರಿ ಮಳೆಯಾಗುತ್ತಿದ್ದು, ಹಲವೆಡೆ ಜನಜೀವನ ಅಸ್ತವ್ಯಸ್ಥಗೊಂಡಿದೆ.

ಮೋಕಾ ಚಂದಮಾರುತ ಇಂದು ಓದಿಶಾಗೆ ಅಪ್ಪಳಿಸಲಿದೆ. ಪರಿಣಾಮ ರಾಜ್ಯದಲ್ಲಿ ಭಾರಿ ಮಳೆಯಾಗಲಿದೆ. ಕರ್ನಾಟಕದ ಕರಾವಳಿಯ ಜಿಲ್ಲೆಗಳಾದ ಉಡುಪಿ, ದಕ್ಷಿಣ ಕನ್ನಡ, ಉತ್ತರ ಕನ್ನಡ, ದಕ್ಷಿಣ ಒಳನಾಡಿನ ಬೆಂಗಳೂರು ನಗರ, ಬೆಂಗಳೂರು ಗ್ರಾಮಾಂತರ, ಚಾಮರಾಜನಗರ, ಚಿಕ್ಕಮಗಳೂರು, ಹಾಸನ, ಕೊಡಗು, ಮಂಡ್ಯ, ಮೈಸೂರು, ರಾಮನಗರ, ಕೋಲಾರ, ದಾವಣಗೆರೆ, ಶಿವಮೊಗ್ಗ, ತುಮಕೂರು ಜಿಲ್ಲೆಗಳಲ್ಲಿ ಗುಡುಗು ಸಹಿತ ಭಾರಿ ಮಳೆಯಾಗಲಿದೆ.

ಉತ್ತರ ಒಳನಾಡಿನ ಬೆಳಗಾವಿ, ಧಾರವಾಡ, ಹಾವೇರಿ ಸೇರಿದಂತೆ ಕೆಲ ಜಿಲ್ಲೆಗಳಲ್ಲಿ ಮಳೆಯಾಗಲಿದೆ ಎಂದು ಹವಾಮಾನ ಇಲಾಖೆ ಮುನ್ಸೂಚನೆ ನೀಡಿದೆ

https://pragati.taskdun.com/3-people-deathyellapuramavinakatta/

ಪ್ರಗತಿವಾಹಿನಿ ಸುದ್ದಿಗಳನ್ನು ನಿಮ್ಮ ಸ್ನೇಹಿತರಿಗೆ, ಬೇರೆ ಗ್ರುಪ್ ಗಳಿಗೆ ಶೇರ್ ಮಾಡಿ

Related Articles

Back to top button