ಪ್ರಗತಿವಾಹಿನಿ ಸುದ್ದಿ: ಫೆಂಗಲ್ ಚಂಡಮಾರುತದ ಅಬ್ಬರದ ಪರಿಣಾಮ ರಾಜ್ಯದ ಹಲವು ಜಿಲ್ಲೆಗಳಲ್ಲಿ ಧಾರಾಕಾರ ಮಳೆಯಾಗುತ್ತಿದ್ದು, ಅವಾಂತರಗಳು ಸೃಷ್ಟಿಯಾಗಿವೆ. ಈ ನಡುವೆ ಇನ್ನೂ ಎರಡು ದಿನ ಮಳೆ ಮುಂದುವರೆಯಲಿದೆ ಎಂದು ಹವಾಮಾನ ಇಲಾಖೆ ಮುನ್ಸೂಚನೆ ನೀಡಿದೆ.
ಕರಾವಳಿ ಜಿಲ್ಲೆಗಳು, ದಕ್ಷಿಣ ಒಳನಾಡು, ಬೆಂಗಳೂರಿನಲ್ಲಿ ಭಾರಿ ಮಳೆಯಾಗುತ್ತಿದ್ದು, ಜನಜೀವನ ಅಸ್ತವ್ಯಸ್ಥಗೊಂಡಿದೆ. ಬೆಂಗಳೂರು ಹಾಗೂ ಸುತ್ತಮುತ್ತ ಗುಡುಗು ಸಹಿತ ಭಾರಿ ಮಳೆಯಾಗುತ್ತಿದೆ. ದಕ್ಷಿಣ ಕನ್ನಡ, ಉಡುಪಿ, ಕೊಡಗು, ಚಿಕ್ಕಮಗಳೂರು, ಚಾಮರಾಜನಗರ, ಕೋಲಾರ, ಮೈಸೂರು, ಮಂಡ್ಯ, ರಾಮನಗರ, ಬೆಂಗಳೂರು ನಗರ, ಬೆಂಗಳೂರು ಗ್ರಾಮಾಂತರ ಜಿಲ್ಲೆಗಳಲ್ಲಿ ವ್ಯಾಪಕವಾಗಿ ಮಳೆಯಾಗುತ್ತಿದೆ.
ದಕ್ಷಿಣ ಕನ್ನಡ, ಉಡುಪಿ, ಕೊಡಗು, ಚಿಕ್ಕಮಗಳೂರು, ಬೆಂಗಳೂರಿನಲ್ಲಿ ನಾಳೆಯೂ ಮಳೆ ಮುಂದುವರೆಯಲಿದೆ. ಇನ್ನು ಡಿಸೆಂಬರ್ 5 ಹಾಗೂ 6ರಂದು ರಾಜ್ಯದ ಹಲವೆಡೆ ಅಲ್ಲಲ್ಲಿ ಮಳೆಯಾಗಲಿದೆ ಎಂದು ತಿಳಿಸಿದೆ.
ಪ್ರಗತಿವಾಹಿನಿ ಸುದ್ದಿಗಳನ್ನು ನಿಮ್ಮ ಸ್ನೇಹಿತರಿಗೆ, ಬೇರೆ ಗ್ರುಪ್ ಗಳಿಗೆ ಶೇರ್ ಮಾಡಿ