Belagavi NewsBelgaum NewsElection NewsKarnataka NewsPolitics

*ಏಪ್ರಿಲ್ 28ಕ್ಕೆ ಬೆಳಗಾವಿಗೆ ಪ್ರಧಾನಿ ಮೋದಿ*

ಪ್ರಗತಿವಾಹಿನಿ ಸುದ್ದಿ: ಬೆಳಗಾವಿ ಹಾಗೂ‌ ಚಿಕ್ಕೋಡಿ ಲೋಕಸಭಾ ‌ಚುನಾವಣೆಯ ಪ್ರಚಾರಕ್ಕಾಗಿ ಪ್ರಧಾನಿ ನರೇಂದ್ರ ‌ಮೋದಿ ಏ.28 ರಂದು ಬೆಳಗಾವಿಗೆ ಆಗಮಿಸಲಿದ್ದು, ಮಾಲಿನಿ ಸಿಟಿ ಮೈದಾನದಲ್ಲಿ ಸಮಾವೇಶದಲ್ಲಿ ಭಾಗಿಯಾಗಲಿದ್ದಾರೆ.

ಈ ಕುರಿತು ಸುದ್ದಿ ಗೋಷ್ಠಿಯಲ್ಲಿ ಬಿಜೆಪಿ ಮುಖಂಡ ಎಂ.ಬಿ.ಜೀರಲಿ ಮಾಹಿತಿ ನೀಡಿದ್ದು, ಪ್ರಧಾನಿ ನರೇಂದ್ರ ಮೋದಿ ಏ. 28 ರಂದು ಬೆಳಿಗ್ಗೆ 11.30ಕ್ಕೆ ಬೆಳಗಾವಿ ವಿಮಾನ ನಿಲ್ದಾಣಕ್ಕೆ ಆಗಮಿಸಲಿದ್ದಾರೆ. ಮಧ್ಯಾಹ್ನ 12 ಕ್ಕೆ ಸಮಾವೇಶದಲ್ಲಿ ಭಾಗಿಯಾಗಲಿದ್ದಾರೆ. ಈ ಕಾರ್ಯಕ್ರಮಕ್ಕೆ ಲಕ್ಷಾಂತರ ಸಂಖ್ಯೆಯಲ್ಲಿ ಸಾರ್ವಜನಿಕರು ಆಗಮಿಸುವ ನಿರೀಕ್ಷೆ ಇದೆ. ಬೆಳಗಾವಿಯ ಸಮಾವೇಶ ಮುಗಿಸಿಕೊಂಡು ಪ್ರಧಾನಿ‌ ಮೋದಿ ವಿಜಯಪುರಕ್ಕೆ ತೆರಳಲಿದ್ದಾರೆ ಎಂದರು.

ಬಿಜೆಪಿ ರಾಜ್ಯಾಧ್ಯಕ್ಷ ಬಿ.ವೈ.ವಿಜಯೇಂದ್ರ, ಮಾಜಿ ಸಿಎಂ ಬಿ.ಎಸ್.ಯಡಿಯೂರಪ್ಪ, ಬಿಜೆಪಿ ಚುನಾವಣೆಯ ಉಸ್ತುವಾರಿ‌ ರಾಧಾ ಮೋಹನ್ ದಾಸ್ಆಗಮಿಸಲಿದ್ದಾರೆ. ಬೆಳಗಾವಿ ‌ಹಾಗೂ‌ ಚಿಕ್ಕೋಡಿ‌ ಲೋಕಸಭಾ ‌ಕ್ಷೇತ್ರದ ಜನರು ಸಮಾವೇಶದಲ್ಲಿ ಭಾಗಿಯಾಗಲಿದ್ದಾರೆ ಎಂದರು.

Home add -Advt

ಬಿಜೆಪಿ ರಾಜ್ಯ ಉಪಾಧ್ಯಕ್ಷ ಅನಿಲ್ ಬೆನಕೆ ಮಾತನಾಡಿ, ರಾಮದುರ್ಗದಲ್ಲಿ ಕಾರ್ಯಕರ್ತರು ಹುಮ್ಮಸ್ಸಿನಿಂದ ಕೆಲಸ ಮಾಡುತ್ತಿದ್ದಾರೆ. ಬಿಜೆಪಿಯಲ್ಲಿ ಯಾವುದೇ ಅಸಮಾಧಾನ ಇಲ್ಲ ಎಂದರು.

ಬಿಜೆಪಿ ಬೆಳಗಾವಿ ಗ್ರಾಮೀಣ ಜಿಲ್ಲಾಧ್ಯಕ್ಷ ಸುಭಾಷ ಪಾಟೀಲ್, ನಗರ ಘಟಕದ ಅಧ್ಯಕ್ಷೆ ಗೀತಾ ಸುತಾರ, ವಿಧಾನ ಪರಿಷತ್ತಿನ ಸದಸ್ಯ ಹನಮಂತ ನಿರಾಣಿ, ಪಾಲಿಕೆ ಸದಸ್ಯ ಹನುಮಂತ ಕೊಂಗಾಲಿ ಇದ್ದರು.


Related Articles

Back to top button