Latest

*ಬಿರುಗಾಳಿ, ಗುಡುಗು ಸಹಿತ ಭಾರಿ ಮಳೆ ಎಚ್ಚರಿಕೆ; ಹವಾಮಾನ ಇಲಾಖೆ ಮುನ್ಸೂಚನೆ*

ಪ್ರಗತಿವಾಹಿನಿ ಸುದ್ದಿ; ಬೆಂಗಳೂರು: ಮುಂದಿನ 24 ಗಂಟೆಯಲ್ಲಿ ರಾಜ್ಯದಲ್ಲಿ ಭಾರಿ ಮಳೆಯಾಗಲಿದೆ ಎಂದು ಹವಾಮಾನ ಇಲಾಖೆ ಮುನ್ಸೂಚನೆ ನೀಡಿದೆ.

ಉತ್ತರ ಹಾಗೂ ದಕ್ಷಿಣ ಒಳನಾಡಿನ ಹಲವು ಜಿಲ್ಲೆಗಳಲ್ಲಿ ಧಾರಾಕಾರ ಮಳೆಯಾಗಲಿದೆ. ಉತ್ತರ ಒಳನಾಡಿನ ಜಿಲ್ಲೆಗಳಾದ ಬೆಳಗಾವಿ, ಬಾಗಲಕೋಟೆ, ಬೀದರ್, ಯಾದಗಿರಿ, ಧಾರವಾಡ, ಕೊಪ್ಪಳ, ಕಲಬುರ್ಗಿ, ರಾಯಚೂರು, ಹಾವೇರಿ ಹಾಗೂ ದಕ್ಷಿಣ ಒಳನಾಡಿದ ಬೆಂಗಳೂರು ನಗರ, ಬೆಂಗಳೂರು ಗ್ರಾಮಾಂತರ, ಚಿಕ್ಕಮಗಳೂರು, ಹಾಸನ, ತುಮಕೂರು, ಚಾಮರಾಜನಗರ, ಮೈಸೂರು, ದಾವಣಗೆರೆ ಜಿಲ್ಲೆಗಳಲ್ಲಿ ಗುಡುಗು ಸಹಿತ ಭಾರಿ ಮಳೆಯಾಗುವ ಸಾದ್ಯತೆ ಇದೆ.

Home add -Advt

ಬೀದರ್, ಗದಗ, ಕೊಪ್ಪಳ, ಹಾವೇರಿ, ಬಾಗಲಕೋಟೆ, ರಾಯಚೂರು ಜಿಲ್ಲೆಗಳಲ್ಲಿ ಬಿರುಗಾಳಿ, ಗುಡುಗು ಸಹಿತ ಭಾರಿ ಮಳೆಯಾಗಲಿದೆ. ಗಾಳಿಯು ಗಂಟೆಗೆ 30-40 ಕೀ.ಮೀ ವೇಗದಲ್ಲಿ ಬೀಸಲಿದೆ ಎಂದು ಎಚ್ಚರಿಕೆ ನೀಡಿದೆ.

ಇನ್ನು ಕರಾವಳಿ ಜಿಲ್ಲೆಯಾದ ದಕ್ಷಿಣ ಕನ್ನಡದಲ್ಲಿ ಕೆಲವೆಡೆ ಮಳೆಯಾಗಲಿದೆ. ಬೆಂಗಳೂರಿನಲ್ಲಿ ಮೋಡಕವಿದ ವಾತಾವರಣವಿದ್ದು ಸಂಜೆಯವೇಳೆಗೆ ಗುಡುಗು ಸಹಿತ ಮಳೆಯಾಗಲಿದೆ ಎಂದು ತಿಳಿಸಿದೆ.

https://pragati.taskdun.com/sslc-exam9-teacherssuspendedbidarbhalki/

Related Articles

Back to top button