Kannada NewsKarnataka NewsLatest
*ಮತ್ತೆ ಭಾರಿ ಮಳೆ ಎಚ್ಚರಿಕೆ; ಕರಾವಳಿಯಲ್ಲಿ ಯೆಲ್ಲೋ ಅಲರ್ಟ್ ಘೋಷಣೆ*

ಪ್ರಗತಿವಾಹಿನಿ ಸುದ್ದಿ; ಬೆಂಗಳೂರು: ಇಂದಿನಿಂದ ರಾಜ್ಯದ ಕರ್ವಾವಳಿ ಜಿಲ್ಲೆಗಳಲ್ಲಿ ಮತ್ತೆ ಭಾರಿಮಳೆಯಾಗಲಿದ್ದು, ಮುಂಜಾಗೃತಾ ಕ್ರಮವಾಗಿ ಯೆಲ್ಲೋ ಅಲರ್ಟ್ ಘೋಷಿಸಲಾಗಿದೆ.
ಉತ್ತರ ಕನ್ನಡ, ದಕ್ಷಣಿ ಕನ್ನಡ, ಉಡುಪಿ ಜಿಲ್ಲೆಗಳಲ್ಲಿ ಇಂದಿನಿಂದ ವರುಣಾರ್ಭಟ ಮತ್ತೆ ಜೋರಾಗಲಿದೆ ಎಂದು ಹವಾಮಾನ ಇಲಾಖೆ ಮುನ್ಸೂಚನೆ ನೀಡಿದೆ.
ಬೆಳಗಾವಿ, ಬೀದರ್, ಬಾಗಲಕೋಟೆ, ಗದಗ, ಹಾವೇರಿ, ಕಲಬುರ್ಗಿ, ಕೊಪ್ಪಳ, ರಾಯಚೂರು, ವಿಜಯಪುರ, ಯಾದಗಿರಿ, ಬಳ್ಳಾರಿ, ಬೆಂಗಳೂರು ಗ್ರಾಮಾಂತರ, ಬೆಂಗಳೂರು ನಗರ, ಚಿಕ್ಕಮಗಳೂರು, ಕೊಡಗು, ದಾವಣಗೆರೆ, ಹಾಸನ, ರಾಮನಗರ, ಶಿವಮೊಗ್ಗ ಜಿಲ್ಲೆಗಳಲ್ಲಿಯೂ ಮಳೆಯಾಗಲಿದೆ.
ರಾಜ್ಯಾದ್ಯಂತ ಒಂದೆರಡು ದಿನಗಳಲ್ಲಿ ಬಿರುಗಾಳಿ ಸಹಿತ ಮಳೆಯಾಗಲಿದ್ದು, ಗಂಟೆಗೆ 40-50 ಕೀ.ಮೀ ವೇಗದಲ್ಲಿ ಗಾಳಿ ಬೀಸಲಿದೆ ಎಂದು ತಿಳಿಸಿದೆ.



