ಪ್ರಗತಿವಾಹಿನಿ ಸುದ್ದಿ; ಕಾರವಾರ: ಕರಾವಳಿ ಜಿಲ್ಲೆಗಳಲ್ಲಿ ವರುಣಾರ್ಭಟಕ್ಕೆ ಜನ ಜೀವನ ಅಸ್ತವ್ಯಸ್ಥಗೊಂಡಿದ್ದು, ಮಳೆ ಅವಾಂತರದಿಂದ ಕಳೆದ 24 ಗಂಟೆಯಲ್ಲಿ ಮೂವರು ಸಾವನ್ನಪ್ಪಿದ್ದಾರೆ.
ಭಾರಿ ಮಳೆ ಹಿನ್ನೆಲೆಯಲ್ಲಿ ಉತ್ತರ ಕನ್ನಡ, ದಕ್ಷಿಣ ಕನ್ನಡ, ಉಡುಪಿ ಜಿಲ್ಲೆಗಳಲ್ಲಿ ರೆಡ್ ಅಲರ್ಟ್ ಘೋಷಿಸಲಾಗಿದೆ. ಉತ್ತರ ಕನ್ನಡ ಜಿಲ್ಲೆಯ ಕುಮಟಾ ತಾಲೂಕಿನಲ್ಲಿ ಗದ್ದೆಗೆ ನುಗ್ಗಿದ ನೀರಿನ ರಭಸಕ್ಕೆ ಇಬ್ಬರು ಕೊಚ್ಚಿಕೊಂಡು ಹೋಗಿದ್ದಾರೆ.
ಬರ್ಗಿ ಗ್ರಾಮ ಪಂಚಾಯ್ತಿ ವ್ಯಾಪ್ತಿಯಲ್ಲಿ ಈ ದುರಂತ ಸಂಭವಿಸಿದೆ. ಸತೀಶ್ ಪಾಂಡುರಂಗ ನಾಯ್ಕ್ (40), ಉಲ್ಲಾಸ ಗಾವಡಿ (5೦) ಮೃತರು. ಮಳೆಯಿಂದಾಗಿ ಗದ್ದೆ ಸಂಪೂರ್ಣ ಜಲಾವೃತಗೊಂಡಿತ್ತು. ಗದ್ದೆಯಲ್ಲಿ ಹೋಗುವಾಗ ನೀರಿನ ರಭಸಕ್ಕೆ ಇಬ್ಬರೂ ಕಾಲು ಜಾರಿ ಬಿದ್ದು ಸಾವನ್ನಪ್ಪಿದ್ದಾರೆ. ಗೋಕರ್ಣ ಪೊಲೀಸ್ ಠಾಣೆಯಲ್ಲಿ ಪ್ರಕರನ ದಾಖಲಾಗಿದೆ.
ದಕ್ಷಿಣ ಕನ್ನಡ ಜಿಲ್ಲೆಯಲ್ಲಿ ಧಾರಾಕಾರ ಮಳೆಗೆ ಗುಡ್ಡ ಕುಸಿತಗೊಂಡು ಮನೆ ಮೇಲೆ ಬಿದ್ದಿದೆ. ಮನೆಯಲ್ಲಿ ಸಿಲುಕಿದ್ದ ಮಹಿಳೆ ಹೊರಬರಲು ಸಾಧ್ಯವಾಗದೇ ಮೃತಪಟ್ಟಿದ್ದಾರೆ.
ಬಂಟ್ವಾಳ ತಾಲೂಕಿನ ಸಜೀಪ ಮುನ್ನೂರು ಗ್ರಾಮದ ನಂದಾವರದಲ್ಲಿ ಈ ದುರಂತ ಸಂಭವಿಸಿದೆ ಝರೀನಾ (46) ಮೃತರು. ಮನೆಯಲ್ಲಿ ಸಿಲುಕಿದ್ದ ಓರ್ವ ಮಹಿಳೆಯನ್ನು ಅಗ್ನಿಶಾಮಕ ಸಿಬ್ಬಂದಿ, ಪೊಲೀಸರು, ಸ್ಥಳೀಯರು ರಕ್ಷಿಸಿದ್ದಾರೆ.
ಪ್ರಗತಿವಾಹಿನಿ ಸುದ್ದಿಗಳನ್ನು ನಿಮ್ಮ ಸ್ನೇಹಿತರಿಗೆ, ಬೇರೆ ಗ್ರುಪ್ ಗಳಿಗೆ ಶೇರ್ ಮಾಡಿ