Kannada NewsKarnataka NewsLatest

*ಭಾರಿ ಮಳೆ ಮುನ್ಸೂಚನೆ; ಈ ಜಿಲ್ಲೆಗಳಲ್ಲಿ ಆರೆಂಜ್ ಅಲರ್ಟ್ ಘೋಷಣೆ*

ಪ್ರಗತಿವಾಹಿನಿ ಸುದ್ದಿ; ಬೆಂಗಳೂರು: ಇಂದಿನಿಂದ ಮೂರು ದಿನಗಳ ಕಾಲ ರಾಜ್ಯದ ಹಲವು ಜಿಲ್ಲೆಗಳಲ್ಲಿ ಭಾರಿ ಮಳೆಯಾಗಲಿದೆ ಎಂದು ಹವಾಮಾನ ಇಲಾಖೆ ಮುನ್ಸೂಚನೆ ನೀಡಿದೆ.

ಕರಾವಳಿ ಜಿಲ್ಲೆಗಳಲ್ಲಿ ಭಾರಿ ಮಳೆಯಾಗಲಿದ್ದು, ಎರಡು ಜಿಲ್ಲೆಗಳಲ್ಲಿ ಆರೆಂಜ್ ಅಲರ್ಟ್ ಘೋಷಿಸಲಾಗಿದೆ. ಉತ್ತರ ಕನ್ನಡ ಹಾಗೂ ಉಡುಪಿ ಜಿಲ್ಲೆಯಲ್ಲಿ ಇಂದು ಗುಡುಗು ಸಹಿತ ಧಾರಾಕಾರ ಮಳೆಯಾಗಲಿದೆ. ಈ ಹಿನ್ನೆಲೆಯಲ್ಲಿ ಆರೇಂಜ್ ಅಲರ್ಟ್ ಘೋಷಿಸಲಾಗಿದೆ.

Home add -Advt

ಚಿಕ್ಕಮಗಳೂರು, ಕೊಡಗು, ಹಾಸನ, ಬೆಳಗಾವಿ, ಬೀದರ್, ಚಾಮರಾಜನಗರ, ಬೆಂಗಳೂರು ಗ್ರಾಮಾಂತರ, ದಕ್ಷಿಣ ಕನ್ನಡ, ಉತ್ತರ ಕನ್ನಡ, ಉಡುಪಿ ಸೇರಿದಂತೆ ನಾಳೆ ಹಾಗೂ ನಾಡಿದ್ದು ವ್ಯಾಪಕ ಮಳೆಯಾಗುವ ಸಾಧ್ಯತೆ ಇದ್ದು, ಯೆಲ್ಲೋ ಅಲರ್ಟ್ ಘೋಷಿಸಲಾಗಿದೆ.

ಧಾರವಾಡ, ಗದಗ, ಹಾವೇರಿ, ಕಲಬುರ್ಗಿ, ಕೊಪ್ಪಳ, ರಾಯಚೂರು, ಕೋಲಾರ, ಕೊಪ್ಪಳ, ಶಿವಮೊಗ್ಗ, ಮೈಸೂರು, ಮಂಡ್ಯ, ರಾಮನಗರ, ಬೆಂಗಳೂರು ಗ್ರಾಮಾಂತರ, ಬೆಂಗಳೂರು ನಗರ ಜಿಲ್ಲೆಗಳಲ್ಲಿ ಸಾಧಾರಣ ಮಳೆಯಾಗಲಿದೆ.


Related Articles

Back to top button