Cancer Hospital 2
Beereshwara 36
LaxmiTai 5

*ಈ ಜಿಲ್ಲೆಗಳಲ್ಲಿ ಭಾರಿ ಮಳೆ ಎಚ್ಚರಿಕೆ: ಅಲರ್ಟ್ ಘೋಷಣೆ*

Anvekar 3
GIT add 2024-1

ಪ್ರಗತಿವಾಹಿನಿ ಸುದ್ದಿ: ರಾಜ್ಯದ ಕರಾವಳಿ ಹಾಗೂ ಮಲೆನಾಡು ಭಾಗದಲ್ಲಿ ವರುನಾರ್ಭಟ ಮುಂದುವರೆದಿದ್ದು, ಜನಜೀವನ ಅಸ್ತವ್ಯಸ್ಥಗೊಂಡಿದೆ. ಕರಾವಳಿ ಜಿಲ್ಲೆಗಳಲ್ಲಿ ಮುಂದಿನ ಐದು ದಿನಗಳ ಕಾಲ ಭಾರಿ ಮಳೆಯಾಗಲಿದೆ ಎಂದು ಹವಾಮಾನ ಇಲಾಖೆ ಮುನ್ಸೂಚನೆ ನೀಡಿದೆ.

ಭಾರಿ ಮಳೆ ಹಿನ್ನೆಲೆಯಲ್ಲಿ ಉತ್ತರ ಕನ್ನಡ, ದಕ್ಷಿಣ ಕನ್ನಡ, ಉಡುಪಿ, ಚಿಕ್ಕಮಗಳೂರು, ಶಿವಮೊಗ್ಗ ಜಿಲ್ಲೆಗಳಲ್ಲಿ ಆರೇಂಜ್ ಅಲರ್ಟ್ ಘೋಷಿಸಲಾಗಿದೆ. ಉತ್ತರ ಕನ್ನಡ ಹಾಗೂ ಉಡುಪಿ ಜಿಲ್ಲೆಗಳಲ್ಲಿ ನಿರಂತರವಾಗಿ ಮಳೆಯಾಗುತ್ತಿರುವ ಹಿನ್ನೆಲೆಯಲ್ಲಿ ಹಲವೆಡೆ ಗುಡ್ಡ ಕುಸಿತಗೊಂಡಿದೆ. ನದಿಗಳು ಅಪಾಯದ ಮಟ್ಟದಲ್ಲಿ ಹರಿಯುತ್ತಿದ್ದು, ಹಲವೆಡೆ ರಸ್ತೆ, ತೋಟ, ಗದ್ದೆಗಳು ಜಲಾವೃತಗೊಂಡಿವೆ. ಇನ್ನು ಅನೇಕ ಕಡೆಗಳಲ್ಲಿ ರಸ್ತೆ ಸಂಪರ್ಕ ಕಡಿತಗೊಂಡಿದೆ. ಈ ಹಿನ್ನೆಲೆಯಲ್ಲಿ ಕೆಲ ಶಾಲೆಗಳಿಗೆ ರಜೆ ಘೋಷಿಸಲಾಗಿದೆ.

Emergency Service

ಬೆಳಗಾವಿ, ಧಾರವಾಡ, ಕೊಡಗು ಜಿಲ್ಲೆಗಳಲ್ಲಿಯೂ ಧಾರಾಕಾರ ಮಳೆಯಾಗಲಿದೆ. ಈ ಹಿನ್ನೆಲೆಯಲ್ಲಿ ಯೆಲ್ಲೋ ಅಲರ್ಟ್ ಘೋಷಿಸಲಾಗಿದೆ.

ರಾಯಚೂರು, ಗದಗ, ಕೊಪ್ಪಳ, ಬೀದರ್, ಕಲಬುರ್ಗಿ, ಹಾವೇರಿ, ವಿಜಯಪುರ, ವಿಜಯನಗರ, ಯಾದಗಿರಿ, ಬೆಂಗಳೂರು ನಗರ, ಬೆಂಗಳೂರು ಗ್ರಾಮಾಂತರ, ಚಾಮರಾಜನಗರ, ಚಿಕ್ಕಬಳ್ಳಾಪುರ, ಚಿತ್ರದುರ್ಗ, ತುಮಕೂರು, ದಾವಣಗೆರೆ, ಹಾಸನ, ಕೋಲಾರ, ಮಂಡ್ಯ, ರಾಮನಗರ, ಮೈಸೂರು ಜಿಲ್ಲೆಗಳಲ್ಲಿಯೂ ಮಳೆಯಾಗಲಿದೆ ಎಂದು ಮಾಹಿತಿ ನೀಡಿದೆ.

Bottom Add3
Bottom Ad 2