ಪ್ರಗತಿವಾಹಿನಿ ಸುದ್ದಿ: ಕರಾವಳಿ ಭಾಗದಲ್ಲಿ ಬಿರುಗಾಳಿ ಸಹಿತ ಭಾರಿ ಮಳೆಯಾಗಲಿದ್ದು, ಉತ್ತರ ಕರ್ನಟಕ ಭಾಗದ ಹಲವೆಡೆ ಧಾರಾಕಾರ ಮಳೆಯಾಗಲಿದೆ ಎಂದು ಹವಾಮಾನ ಇಲಾಖೆ ಮುನ್ಸೂಚನೆ ನೀಡಿದೆ.
ಜೂನ್ 22ರಿಂದ 24ರವರೆಗೆ ರಾಜ್ಯದ ಹಲವೆಡೆ ಭಾರಿ ಮಳೆಯಾಗಲಿದೆ. ಕರಾವಳಿ ಭಾಗದಲ್ಲಿ ಕೆಲವೆಡೆ ಭೂ ಕುಸಿತವಾಗುವ ಸಂಭವವಿದೆ. ಸಮುದ್ರ ಭಾಗದಲ್ಲಿ 45-50ಕಿ.ಮೀ ವೇಗದಲ್ಲಿ ಗಾಳಿ ಬೀಸಲಿದೆ. ಜೂನ್ 23ರಂದು ಕರಾವಳಿ ಭಾಗದಲ್ಲಿ ರೆಡ್ ಅಲರ್ಟ್ ಘೋಷಿಸಲಾಗಿದೆ.
ಉತ್ತರ ಕರ್ನಾಟಕದಲ್ಲಿ ಜೂನ್ 22ರಿಂದ 23ವರೆಗೆ ಆರೇಂಜ್ ಅಲರ್ಟ್ ಘೋಷಿಸಲಾಗಿದೆ. ಕಲಬುರ್ಗಿ ಸೇರಿದಂತೆ ಉತ್ತರ ಕರ್ನಾಟಕದ ಹಲವೆಡೆ ಧಾರಾಕಾರ ಮಳೆಯಾಗಲಿದೆ. ರಾಜಧಾನಿ ಬೆಂಗಳೂರಿನಲ್ಲಿ ಸಾಧಾರಣ ಮಳೆಯಾಗಲಿದೆ.
ಇಂದು ಚಿಕ್ಕಮಗಳೂರು, ಹುಬ್ಬಳ್ಳಿ, ಬಾಗಲಕೋಟೆ ಸೇರಿದಂತೆ ಹಲವು ಜಿಲ್ಲೆಗಳಲ್ಲಿ ವರುಣಾರ್ಭಟ ಆರಂಭವಾಗಿದ್ದು, ಜನ ಜೀವನ ಅಸ್ತವ್ಯಸ್ಥಗೊಂಡಿದೆ. ಬೆಂಗಳೂರಿನ ಕೆಲವೆಡೆಗಳಲ್ಲಿ ಮಳೆಯಾಗಿದೆ.
ಪ್ರಗತಿವಾಹಿನಿ ಸುದ್ದಿಗಳನ್ನು ನಿಮ್ಮ ಸ್ನೇಹಿತರಿಗೆ, ಬೇರೆ ಗ್ರುಪ್ ಗಳಿಗೆ ಶೇರ್ ಮಾಡಿ