Karnataka News

*ಮುಂದುವರಿದ ಭಾರೀ ಮಳೆ: ಈ ಜಿಲ್ಲೆಗಳಲ್ಲಿ ರೆಡ್ ಅಲರ್ಟ್ ಘೋಷಣೆ*

ಪ್ರಗತಿವಾಹಿನಿ ಸುದ್ದಿ: ರಾಜ್ಯದ ಕರಾವಳಿ ಹಾಗೂ ಮಲೆನಾಡು ಭಾಗದಲ್ಲಿ ವರುಣಾರ್ಭಟ ಮುಂದುವರೆದಿದ್ದು, ಇನ್ನೂ ನಾಲ್ಕು ದಿನಗಳ ಕಾಲ ಭಾರೀ ಮಳೆಯಾಗಲಿದೆ ಎಂದು ಹವಾಮಾನ ಇಲಾಖೆ ಮುನ್ಸೂಚನೆ ನೀಡಿದೆ.

ಕರಾವಳಿ ಜಿಲ್ಲೆಗಳಲ್ಲಿ ರಣಭೀಕರ ಮಳೆಯಿಂದಾಗಿ ದುರಂತಗಳು ಸಂಭವಿಸಿದ್ದು, ಅದರಲ್ಲಿಯೂ ದಕ್ಷಿಣ ಕನ್ನಡ ಜಿಲ್ಲೆಯಲ್ಲಿ ಎರಡು ದಿನದಲ್ಲಿ 7 ಜನರು ಸಾವನ್ನಪ್ಪಿದ್ದಾರೆ. ನದಿ, ಹಳ್ಳ-ಕೊಳ್ಳಗಳು ತುಂಬಿ ಹರಿಯುತ್ತಿದ್ದು, ರಸ್ತೆ, ತೋಟ, ಮನೆಗಳು ಹಲವೆಡೆ ಜಲಾವೃತವಾಗಿವೆ. ಉತ್ತರ ಕನ್ನಡ, ದಕ್ಷಿಣ ಕನ್ನಡ ಜಿಲ್ಲೆಗಳಲ್ಲಿ ಗುಡ್ಡ ಕುಸಿತ ಸಂಭವಿಸುತ್ತಿವೆ.

ದಕ್ಷಿಣ ಕನ್ನಡಡದಲ್ಲಿ ಇಂದೂ ಕೂಡ ಅಂಗನವಾಡಿ, ಪ್ರಾಥಮಿಕ ಹಾಗೂ ಪ್ರೌಢ ಶಾಲೆಗಳಿಗೆ ರಜೆ ಘೋಷಿಸಲಾಗಿದೆ. ಚಿಕ್ಕಮಗಳೂರಿನಲ್ಲಿಯೂ ಶಾಲೆಗಳಿಗೆ ರಜೆ ಘೋಷಿಸಲಾಗಿದೆ.

ರಾಜ್ಯದಲ್ಲಿ ಇನ್ನೂ ನಾಲ್ಕು ದಿನ ಮಳೆ ಮುಂದುವರೆಯಲಿದ್ದು, ಉತ್ತರ ಕನ್ನಡ, ದಕ್ಷಿಣ ಕನ್ನಡ, ಉಡುಪಿ ಜಿಲ್ಲೆಗಳಲ್ಲಿ ರೆಡ್ ಅಲರ್ಟ್ ಘೋಷಿಸಲಾಗಿದೆ. ಚಿಕ್ಕಮಗಳೂರು, ಕೊಡಗು, ಶಿವಮೊಗ್ಗ ಜಿಲ್ಲೆಗಳಲ್ಲಿ ಆರೇಂಜ್ ಅಲರ್ಟ್ ಘೋಷಿಸಲಾಗಿದೆ.

ಪ್ರಗತಿವಾಹಿನಿ ಸುದ್ದಿಗಳನ್ನು ನಿಮ್ಮ ಸ್ನೇಹಿತರಿಗೆ, ಬೇರೆ ಗ್ರುಪ್ ಗಳಿಗೆ ಶೇರ್ ಮಾಡಿ

Related Articles

Back to top button