Karnataka News

*ಮಹಾಮಳೆ: ಯಾವೆಲ್ಲ ಜಿಲ್ಲೆಗಳಿಗೆ ಅಲರ್ಟ್ ಘೋಷಣೆ; ಇಲ್ಲಿದೆ ಮಾಹಿತಿ*

ಪ್ರಗತಿವಾಹಿನಿ ಸುದ್ದಿ: ರಾಜ್ಯದಲ್ಲಿ ವರುಣಾರ್ಭಟ ಮುಂದುವರೆದಿದೆ. ಜುಲೈ 24ವರೆಗೂ ಮಹಾಮಳೆಯಾಗಲಿದೆ ಎಂದು ಹವಾಮಾನ ಇಲಾಖೆ ಮುನ್ಸೂಚನೆ ನೀಡಿದೆ.

Home add -Advt

ಕರಾವಳಿ, ಮಲೆನಾಡು ಜಿಲ್ಲೆಗಳು ಈಗಾಗಲೇ ಮಳೆ ಅಬ್ಬರಕ್ಕೆ ತತ್ತರಿಸಿ ಹೋಗಿವೆ. ಈ ನಡಿವೆ ಇನ್ನಷ್ಟು ಮಳೆಯಾಗಲಿದೆ ಎಂದು ಹವಾಮಾನ ಇಲಾಖೆ ಮುನ್ಸೂಚನೆ ನೀಡಿದೆ.

ಉತ್ತರ ಕನ್ನಡ, ದಕ್ಷಿಣ ಕನ್ನಡ, ಉಡುಪಿ, ಶಿವಮೊಗ್ಗ, ಚಿಕ್ಕಮಗಳೂರು, ಕೊಡಗು ಜಿಲ್ಲೆಗಳಲ್ಲಿ ರೆಡ್ ಅಲರ್ಟ್ ಘೋಷಿಸಲಾಗಿದೆ. ಬೆಳಗಾವಿ, ಬೀದರ್, ಕಲಬುರ್ಗಿ, ರಾಯಚೂರು, ಯಾದಗಿರಿ, ಹಾಸನ ಜಿಲ್ಲೆಗಳಲ್ಲಿ ಯೆಲ್ಲೋ ಅಲರ್ಟ್ ಘೋಷಿಸಲಾಗಿದೆ.

ಮೈಸೂರು, ಮಂದ್ಯ, ಕೋಲಾರ, ದಾವಣಗೆರೆ, ತುಮಕೂರು, ಚಿಕ್ಕಬಳ್ಳಾಪುರ, ಬೆಂಗಳೂರು ಗ್ರಾಮಾಂತರ, ಬೆಂಗಳುರು ನಗರ, ವಿಜಯನಗರ, ರಾಮನಗರ, ಬಳ್ಳಾರಿ, ಕೊಪ್ಪಳ, ವಿಜಯನಗರ ಜಿಲ್ಲೆಗಳಲ್ಲಿಯೂ ಮಳೆಯಾಗಲಿದೆ. ರಾಜ್ಯದಲ್ಲಿ ಜುಲೈ 24ರವರೆಗೂ ಭಾರಿ ಮಳೆ ಮುಂದುವರೆಯಲಿದೆ ಎಂದು ತಿಳಿದುಬಂದಿದೆ.

Related Articles

Back to top button