ಪ್ರಗತಿವಾಹಿನಿ ಸುದ್ದಿ: ಅರಬ್ಬಿ ಸಮುದ್ರದಲ್ಲಿ ವಾಯುಭಾರ ಕುಸಿತ ಹಿನ್ನೆಲೆಯಲ್ಲಿ ರಾಜ್ಯದ ಕರಾವಳಿ, ಮಲೆನಾಡು, ದಕ್ಷಿಣ ಒಳನಾಡಿನ ಜಿಲ್ಲೆಗಳಲ್ಲಿ ಧಾರಾಕಾರ ಮಳೆ ಮುಂದುವರೆದಿದೆ. ವಾಯುಭಾರ ಕುಸಿತವಾಗಿದ್ದರಿಂದ ಅರಬ್ಬಿ ಸಮುದ್ರದಲ್ಲಿ ಅಲೆಗಳ ಅಬ್ಬರ ಜೋರಾಗಿದ್ದು, ರಕ್ಕಸ ಗಾತ್ರದ ಅಲೆಗಳು ಏಳುತ್ತಿವೆ. ಮೀನುಗಾರರಿಗೆ ಸಮುದ್ರಕ್ಕೆ ಇಳಿಯದಂತೆ ಸೂಚಿಸಲಾಗಿದೆ.
ರಾಜ್ಯದಲ್ಲಿ ಇನ್ನೂ ನಾಲ್ಕು ದಿನಗಳ ಕಾಲ ಭಾರಿ ಮಳೆಯಾಗಲಿದೆ ಎಂದು ಹವಾಮಾನ ಇಲಾಖೆ ತಿಳಿಸಿದೆ. ಉತ್ತರ ಕನ್ನಡ, ದಕ್ಷಿಣ ಕನ್ನಡ, ಉಡುಪಿ, ಚಿಕ್ಕಮಗಳೂರು, ಕೊಡಗು, ಶಿವಮೊಗ್ಗ ಜಿಲ್ಲೆಗಳಲ್ಲಿ ಅತಿ ಹೆಚ್ಚು ಮಳೆ ಹಿನ್ನೆಲೆಯಲ್ಲಿ ರೆಡ್ ಅಲರ್ಟ್ ಘೋಷಿಸಲಾಗಿದೆ.
ಬೆಳಗಾವಿ, ಹಾಸನ ಜಿಲ್ಲೆಗಳಲ್ಲಿಯೂ ಮಳೆ ಅಬ್ಬರ ಜೋರಾಗಲಿದ್ದು, ಯೆಲ್ಲೋ ಅಲರ್ಟ್ ಘೋಷಿಸಲಾಗಿದೆ. ಬೀದರ್, ಕಲಬುರ್ಗಿ, ಯಾದಗಿರಿ ಜಿಲ್ಲೆಗಳಲ್ಲಿ ಯೆಲ್ಲೋ ಅಲರ್ಟ್ ಘೋಷಿಸಲಾಗಿದೆ.
ಗದಗ, ಹಾವೇರಿ, ಧಾರವಾಡ, ಕೊಪ್ಪಳ, ರಾಯಚೂರು, ವಿಜಯಪುರ, ಬೆಂಗಳೂರು ಗ್ರಾಮಾಂತರ, ಬೆಂಗಳೂರು ನಗರ, ಚಿಕ್ಕಬಳ್ಳಾಪುರ, ದಾವಣಗೆರೆ, ತುಮಕೂರು, ಮಂಡ್ಯ, ರಾಮನಗರ, ಮೈಸೂರು, ವಿಜಯನಗರ ಜಿಲ್ಲೆಗಾಳಲ್ಲಿಯೂ ಮಳೆಯಾಗಲಿದೆ .
ಪ್ರಗತಿವಾಹಿನಿ ಸುದ್ದಿಗಳನ್ನು ನಿಮ್ಮ ಸ್ನೇಹಿತರಿಗೆ, ಬೇರೆ ಗ್ರುಪ್ ಗಳಿಗೆ ಶೇರ್ ಮಾಡಿ