Uncategorized

*ಧಾರಾಕಾರ ಮಳೆ; ದಕ್ಷಿಣ ಕನ್ನಡದಲ್ಲಿ ರೆಡ್ ಅಲರ್ಟ್ ಘೋಷಣೆ; ಸಹಾಯವಾಣಿ ಆರಂಭಿಸಿದ ಜಿಲ್ಲಾಡಳಿತ*

ಪ್ರಗತಿವಾಹಿನಿ ಸುದ್ದಿ; ಮಂಗಳೂರು: ದಕ್ಷಿಣ ಕನ್ನಡ ಜಿಲ್ಲೆಯಲ್ಲಿ ವ್ಯಾಪಕ ಮಳೆಯಾಗುತ್ತಿದ್ದು, ಭಾರತೀಯ ಹವಾಮಾನ ಇಲಾಖೆ ಮತ್ತು ಕರ್ನಾಟಕ ರಾಜ್ಯ ನೈಸರ್ಗಿಕ ವಿಕೋಪ ಉಸ್ತುವಾರಿ ಕೇಂದ್ರದ ಮುನ್ಸೂಚನೆಯಂತೆ ಜುಲೈ 4 ರಿಂದ 5 ರವರೆಗೆ ರೆಡ್ ಅಲರ್ಟ್ ಘೋಷಿಸಲಾಗಿದೆ.

ಜಿಲ್ಲೆಯಲ್ಲಿ ರೆಡ ಅಲರ್ಟ್ ಹಿನ್ನೆಲೆಯಲ್ಲಿ ಮುಂಜಾಗ್ರತಾ ಕ್ರಮವಾಗಿ ದಕ್ಷಿಣ ಕನ್ನಡ ಜಿಲ್ಲಾ ವಿವತ್ತು ನಿರ್ವಹಣಾ ಪ್ರಾಧಿಕಾರವು ಈ ಕೆಳಗಿನಂತ ತುರ್ತು ಕ್ರಮಗಳನ್ನು ಕೈಗೊಂಡಿದೆ.

  1. ದಕ್ಷಿಣ ಕನ್ನಡ ಜಿಲ್ಲೆಯ ಎಲ್ಲಾ ಅಂಗನವಾಡಿ ಕೇಂದ್ರಗಳಿಗೆ ಪ್ರಾಥಮಿಕ ಮತ್ತು ಪ್ರೌಢಶಾಲೆ, ಪದವಿ ಪೂರ್ವ ಕಾಲೇಜು, ಸರ್ಕಾರಿ ಅನುದಾನಿತ ಮತ್ತು ಖಾಸಗಿ ವಿದ್ಯಾಸಂಸ್ಥೆಗಳಿಗೆ ದಿನಾಂಕ: 05.07.2023 ರಂದು ರಜೆಯನ್ನು ಘೋಷಿಸಲಾಗಿದೆ.
  2. ನೀರು ಇರುವ ತಗ್ಗು ಪ್ರದೇಶ, ಕೆರೆ, ನದಿ ತೀರ ಸಮುದ್ರ ತೀರಕ್ಕೆ ಮಕ್ಕಳು ಹೋಗದಂತೆ ಪಾಲಕರು ಜಾಗ್ರತೆ ವಹಿಸುವುದು.
  3. ಮೀನುಗಾರರು ಸಮುದ್ರಕ್ಕೆ ಇಳಿಯದಂತೆ ಈ ಮೂಲಕ ಸೂಚನೆ ನೀಡಿದೆ.
  4. ಜಿಲ್ಲಾ ಮಟ್ಟದ ಮತ್ತು ತಾಲ್ಲೂಕು ಮಟ್ಟದ ಅಧಿಕಾರಿಗಳು, ಕಡ್ಡಾಯವಾಗಿ ಕೇಂದ್ರ ಸ್ಥಾನದಲ್ಲಿರತಕ್ಕದ್ದು ಹಾಗೂ ವಿಪತ್ತು ನಿರ್ವಹಣೆಯನ್ನು ಚಾಚೂ ತಪ್ಪದೇ ಕಡ್ಡಾಯವಾಗಿ ನಿರ್ವಹಿಸುವುದು.

5, ಜಿಲ್ಲಾಡಳಿತದಿಂದ ವಿವಿಧ ಪ್ರದೇಶಗಳಿಗೆ ನೇಮಿಸಲಾಗಿರುವ ನೋಡಲ್ ಅಧಿಕಾರಿಗಳು, ಸದಾಜಾಗೃತರಾಗಿದ್ದು, ಸಾರ್ವಜನಿಕ ದೂರುಗಳಿಗೆ ತಕ್ಷಣ ಸ್ಪಂದಿಸುವುದು ಮತ್ತು ಜಿಲ್ಲಾಧಿಕಾರಿ ಕಛೇರಿಯ ನಿಯಂತ್ರಣ ಕೊಠಡಿಯೊಂದಿಗೆ ನಿರಂತರ ಸಂಪರ್ಕದಲ್ಲಿರುವುದು.

  1. ಪ್ರವಾಸಿಗರು / ಸಾರ್ವಜನಿಕರು ನದಿತೀರಕ್ಕೆ, ಸಮುದ್ರತೀರಕ್ಕೆ ತೆರಳದಂತೆ ಸೂಚಿಸಲಾಗಿದೆ.
  2. ಸಂಬಂಧಪಟ್ಟ ಇಲಾಖಾ ಅಧಿಕಾರಿಗಳು ಪ್ರತೀ ತಾಲೂಕುಗಳಲ್ಲಿ ಕಾಳಜಿ ಕೇಂದ್ರವನ್ನು ತೆರೆದು ಸನ್ನದ್ಧಸ್ಥಿತಿಯಲ್ಲಿರಿಸಿಕೊಳ್ಳುವುದು * ಪ್ರಾಕೃತಿಕ ವಿಕೋಪ ಸಂಬಂಧಿಸಿದ ಯಾವುದೇ ಸಮಸ್ಯೆಗಳಿಗೆ ಈ ಕೆಳಕಂಡ ದೂರವಾಣಿಯನ್ನು ಸಂಪರ್ಕಿಸುವುದು.

ತುರ್ತು ಸೇವೆಗೆ ಸಹಾಯವಾಣಿ ಸಂಖ್ಯೆ – 0824 2442590ಗೆ ಸಂಪರ್ಕಿಸಬಹುದು ಎಂದು ಜಿಲ್ಲಾಡಳಿತ ತಿಳಿಸಿದೆ.

ಪ್ರಗತಿವಾಹಿನಿ ಸುದ್ದಿಗಳನ್ನು ನಿಮ್ಮ ಸ್ನೇಹಿತರಿಗೆ, ಬೇರೆ ಗ್ರುಪ್ ಗಳಿಗೆ ಶೇರ್ ಮಾಡಿ

Related Articles

Back to top button