ಪ್ರಗತಿವಾಹಿನಿ ಸುದ್ದಿ; ಬೆಂಗಳೂರು: ಕರ್ನಾಟಕದಲ್ಲಿ ಮುಂಗಾರು ಚುರುಕುಗೊಂಡಿದ್ದು, ರಾಜ್ಯದ ಹಲವು ಜಿಲ್ಲೆಗಳಲ್ಲಿ ಧಾರಾಕಾರ ಮಳೆಯಾಗುತ್ತಿದೆ. ಅದರಲ್ಲಿಯೂ ಕರಾವಳಿ ಭಾಗದಲ್ಲಿ ವರುಣಾರ್ಭಟಕ್ಕೆ ಜನರು ತತ್ತರಿಸಿದ್ದಾರೆ.
ರಾಜ್ಯದ ಉತ್ತರ ಒಳನಾಡು, ದಕ್ಷಿಣ ಒಳನಾಡಿನ ಜಿಲ್ಲೆಗಳಲ್ಲಿ ಉತ್ತಮ ಮಳೆಯಾಗುತ್ತಿದೆ. ಕರಾವಳಿ ಜಿಲ್ಲೆಗಳಾದ ಉತ್ತರ ಕನ್ನಡ, ದಕ್ಷಿಣ ಕನ್ನಡ, ಉಡುಪಿ ಜಿಲ್ಲೆಗಳಲ್ಲಿ ಭಾರಿ ಮಳೆಯಾಗುತ್ತಿದೆ. ಈ ಹಿನ್ನೆಲೆಯಲ್ಲಿ ಮುಂಜಾಗೃತಾ ಕ್ರಮವಾಗಿ ಇಂದು ಶಾಲಾ-ಕಾಲೇಜುಗಳಿಗೆ ರಜೆ ಘೋಷಿಸಲಾಗಿದೆ.
ಪಶ್ಚಿಮ ಘಟ್ಟಗಳ ಸಾಲಿನಲ್ಲಿ ವರುಣಾರ್ಭಟ ಜೋರಾಗಿದ್ದು, ಈ ಭಾಗದಲ್ಲಿ ಇಂದಿನಿಂದ ಮೂರು ದಿನಗಳ ಕಾಲ ಅಲರ್ಟ್ ಘೋಷಿಸಲಾಗಿದೆ. ಕರಾವಳಿ ಕರ್ನಾಟಕದ ಜಿಲ್ಲೆಗಳಲ್ಲಿ ರೆಡ್ ಅಲರ್ಟ್ ಘೋಷಿಸಲಾಗಿದೆ. ಇನ್ನು ಚಿಕ್ಕಮಗಳೂರು ಜಿಲ್ಲೆಯಲ್ಲಿ ಆರೇಂಜ್ ಅಲರ್ಟ್ ಘೋಷಿಸಲಾಗಿದೆ.
ಪ್ರಗತಿವಾಹಿನಿ ಸುದ್ದಿಗಳನ್ನು ನಿಮ್ಮ ಸ್ನೇಹಿತರಿಗೆ, ಬೇರೆ ಗ್ರುಪ್ ಗಳಿಗೆ ಶೇರ್ ಮಾಡಿ