Uncategorized

*15 ಜಿಲ್ಲೆಗಳಲ್ಲಿ ಮಹಾ ಮಳೆ ಎಚ್ಚರಿಕೆ; ಕರಾವಳಿಯಲ್ಲಿ ರೆಡಲರ್ಟ್ ಘೋಷಣೆ*

ಪ್ರಗತಿವಾಹಿನಿ ಸುದ್ದಿ; ಬೆಂಗಳೂರು: ಕರಾವಳಿ ಹಾಗೂ ಉತ್ತರ, ದಕ್ಷಿಣ ಒಳನಾಡಿನ ಹಲವೆಡೆ ಈಗಾಗಲೇ ಭಾರಿ ಮಳೆಯಾಗುತ್ತಿದ್ದು, ಒಂದೆಡೆ ಭಾರತೀಯ ಹವಾಮಾನ ಇಲಾಖೆ ಹಠಾತ್ ಪ್ರವಾಹ ಸಂಭವಿಸುವ ಎಚ್ಚರಿಕೆ ನೀಡಿದೆ. ಈ ನಡುವೆ ರಾಜ್ಯದಲ್ಲಿ ಮುಂದಿನ 5 ದಿನಗಳ ಕಾಲ ಮಹಾ ಮಳೆಯಾಗಲಿದೆ ಎಂದು ತಿಳಿದುಬಂದಿದೆ.

ಕರಾವಳಿ, ದಕ್ಷಿಣ ಒಳನಾಡು, ಉತ್ತರ ಒಳನಡಿನ 15 ಜಿಲ್ಲೆಗಳಲ್ಲಿ ಭಾರಿ ಮಳೆಯಾಗಲಿದ್ದು, ಕರಾವಳಿ ಜಿಲ್ಲೆಗಳಲ್ಲಿ ರೆಡ್ ಅಲರ್ಟ್ ಘೋಷಿಸಲಾಗಿದೆ.

Home add -Advt

ಉತ್ತರ ಕನ್ನಡ, ದಕ್ಷಿಣ ಕನ್ನಡ, ಉಡುಪಿ, ಚಿಕ್ಕಮಗಳೂರು ಜಿಲ್ಲೆಗಳಲ್ಲಿ ಅತಿ ಮಳೆಯಾಗಲಿದೆ. ಬೆಳಗಾವಿ, ಬೀದರ್, ಕಲಬುರ್ಗಿ, ಕೊಡಗು, ಶಿವಮೊಗ್ಗ, ಜಿಲ್ಲೆಗಳಲ್ಲಿ ಧಾರಾಕಾರ ಮಳೆಯಾಗಲಿದ್ದು ಆರೇಂಜ್ ಅಲರ್ಟ್ ಘೋಷಿಸಲಾಗಿದೆ.

ಬಾಗಲಕೋಟೆ, ಹಾವೇರಿ, ಕೊಪ್ಪಳ, ರಾಯಚೂರು, ವಿಜಯಪುರ, ಬಳ್ಳಾರಿ, ಚಾಮರಾಜನಗರ, ಹಾಸನ ಜಿಲ್ಲೆಗಳಲ್ಲಿ ಮಳೆಯಾಗಲಿದ್ದು, ಯೆಲ್ಲೋ ಅಲರ್ಟ್ ಘೋಷಿಸಲಾಗಿದೆ.

Related Articles

Back to top button