Latest

ಭಾರಿ ಮಳೆ ಎಚ್ಚರಿಕೆ ನೀಡಿದ ಹವಾಮಾನ ಇಲಾಖೆ

ಪ್ರಗತಿವಾಹಿನಿ ಸುದ್ದಿ; ಬೆಂಗಳೂರು: ರಾಜಧಾನಿ ಬೆಂಗಳೂರು ಸೇರಿದಂತೆ ಇಂದಿನಿಂದ 5 ದಿನಗಳ ಕಾಲ ರಾಜ್ಯದಲ್ಲಿ ಮಳೆಯಾಗಲಿದೆ ಎಂದು ಹವಾಮಾನ ಇಲಾಖೆ ಮುನ್ಸೂಚನೆ ನೀಡಿದೆ.

ಬೆಂಗಳೂರಿನ ಹಲವೆಡೆಗಳಲ್ಲಿ ಇಂದು ಮುಂಜಾನೆಯಿಂದಲೇ ಮಳೆಯಾಗುತ್ತಿದ್ದು, ಮೋಡಕವಿದ ವಾತಾವರಣ, ಶೀತಗಾಳಿ ಹೆಚ್ಚುತ್ತಿದೆ. ಮುಂದಿನ 24ಗಂಟೆಯಲ್ಲಿ ಬೆಂಗಳೂರಿನಲ್ಲಿ ಭಾರಿ ಮಳೆಯಾಗಲಿದೆ.

ಚಂಡಮಾರುತ ಪರಿಣಾಮ ಹಿನ್ನೆಲೆಯಲ್ಲಿ ರಾಜ್ಯದಲ್ಲಿ 5 ದಿನಗಳ ಕಾಲ ಮಳೆಯಾಗಲಿದೆ. ಸಮುದ್ರದಲ್ಲಿ ಅಲೆಗಳ ಅಬ್ಬರ ಹೆಚ್ಚಲಿದ್ದು, ಸಮುದ್ರಕ್ಕೆ ಮೀನುಗಾರರು ಇಳಿಯದಂತೆ ಕಟ್ಟೆಚ್ಚರಕ್ಕೆ ಸೂಚಿಸಲಾಗಿದೆ.

ಇಂದು ರಾತ್ರಿ ತಮಿಳುನಾಡಿಗೆ ಮಾಂಡೌಸ್ ಚಂಡಮಾರುತ ಅಪ್ಪಳಿಸಲಿದ್ದು, ಸಮುದ್ರದಲ್ಲಿ ಅಲೆಗಳ ಹೊಡೆತ ಜೋರಾಗಿದ್ದು, ಬಿರುಗಾಳಿ ಆರಂಭವಾಗಿದೆ. ತಮಿಳುನಾಡಿನ ಉತ್ತರ ಕರಾವಳಿ, ಒಳನಾಡಿನ ಜಿಲ್ಲೆಗಳಾದ ಪುದುಚೆರಿ, ಕಾರೈಕಾಲ್ ನಲ್ಲಿ ನಾಳೆ ಭಾರಿ ಮಳೆಯಾಗಲಿದೆ ಎಂದು ಹವಾಮಾನ ಇಲಾಖೆ ತಿಳಿಸಿದೆ.

ಇನ್ನು ಚಂಡಮಾರುತ ಹಿನ್ನೆಲೆಯಲ್ಲಿ ಚೆನ್ನೈ, ಚೆಂಗಲ್ಪಟ್ಟು, ವಿಲ್ಲುಪುರಂ, ತಿರುವಳ್ಳೂರು, ವೆಲ್ಲೂರು, ಕಡಲೂರು, ರಾಣಿಪೇಟ್, ಕಾಂಚೀಪುರಂ, ಕಲ್ಲಕುರುಚಿ, ತಂಜಾವೂರು, ತಿರುವರೂರು, ನಾಗಪಟ್ಟಣಂ, ಅರಿಯಲೂರು, ಪೆರಂಬಲೂರ್, ಧರ್ಮಪುರ ಸೇರಿದಂತೆ 19 ಜಿಲ್ಲೆಗಳಲ್ಲಿ ಇಂದು ಹಾಗೂ ನಾಳೆ ಶಾಲೆ-ಕಾಲೇಜುಗಳಿಗೆ ರಜೆ ಘೋಷಿಸಲಾಗಿದೆ.

ಸಬ್ ಇನ್ಸ್ ಪೆಕ್ಟರ್ ಹುದ್ದೆಗಳ ಲಿಖಿತ ಪರೀಕ್ಷೆ; ದಿನಾಂಕ ಪ್ರಕಟ

https://pragati.taskdun.com/ksrpsub-inspectorwritten-testdate-annunce/

ಪ್ರಗತಿವಾಹಿನಿ ಸುದ್ದಿಗಳನ್ನು ನಿಮ್ಮ ಸ್ನೇಹಿತರಿಗೆ, ಬೇರೆ ಗ್ರುಪ್ ಗಳಿಗೆ ಶೇರ್ ಮಾಡಿ

Related Articles

Back to top button