ಪ್ರಗತಿವಾಹಿನಿ ಸುದ್ದಿ; ನವದೆಹಲಿ: ಮಹಾರಾಷ್ಟ್ರ, ಗೋವಾ, ತೆಲಂಗಾಣ, ತಮಿಳುನಾಡಿನ ಹಲವೆಡೆಗಳಲ್ಲಿ ಭಾರಿ ಮಳೆಯಾಗುತ್ತಿದ್ದು, ಇಂದು ರಾಜ್ಯದಲ್ಲಿಯೂ ಮಳೆಯಾಗುವ ಸಾಧ್ಯತೆ ಇದೆ.
ರಾಜ್ಯದಲ್ಲಿ ಇಂದಿನಿಂದ ನಾಲ್ಕು ದಿನಗಳ ಕಾಲ ಮಳೆ ಮುಂದುವರೆಯಲಿದೆ. ಕರಾವಳಿ, ಮಲೆನಾಡು ಜಿಲ್ಲೆಗಳಲ್ಲಿ ಜೂನ್ 14ರವರೆಗೆ ವರುಣನ ಆರ್ಭಟ ಜೋರಾಗಲಿದೆ. ಇಂದು ಬೆಂಗಳೂರು, ಚಿಕ್ಕಮಗಳೂರು, ಹಾಸನ, ಶಿವಮೊಗ್ಗ, ಕೊಡಗು, ದಕ್ಷಿಣ ಕನ್ನಡ, ಉತ್ತರ ಕನ್ನಡ, ಉಡುಪಿ ಸೇರಿದಂತೆ ಹಲವೆಡೆ ಭಾರಿ ಮಳೆಯಾಗಲಿದೆ.
ಕರ್ನಾಟಕದ ಕರಾವಳಿ ಹಾಗೂ ದಕ್ಷಿಣ ಒಳನಾಡಿನಲ್ಲಿ ಇನ್ನೂ ನಾಲ್ಕು ದಿನ ಗುಡುಗು, ಮಿಂಚು ಸಹಿತ ಮಳೆಯಾಗಲಿದೆ ಎಂದು ಹವಾಮಾನ ಇಲಾಖೆ ತಿಳಿಸಿದೆ.
ಭಾರಿ ಮಳೆ ಹಿನ್ನೆಲೆಯಲ್ಲಿ ಚಿಕ್ಕಮಗಳೂರಿನ 5, ಕೊಪ್ಪಳದ 6, ಶೃಂಗೇರಿಯ 9, ಕಡೂರಿನ 2, ತರೀಕೆರೆಯ 1 ಗ್ರಾಮವನ್ನು ಜಿಲ್ಲಾಡಳಿತ ಅಪಾಯದ ಗ್ರಾಮಗಳೆಂದು ಗುರುತಿಸಿದೆ. ಎನ್.ಆರ್.ಪುರದ 17, ಮೂಡಿಗೆರೆಯ 24, ಶೃಂಗೇರಿಯ 7 ಹಾಗೂ ಚಿಕ್ಕಮಗಳೂರು-ಕೊಪ್ಪದ 6 ಗ್ರಾಮಗಳನ್ನು ಸುರಕ್ಷಿತ ಪ್ರದೇಶ ಎಂದು ಜಿಲ್ಲಾಡಳಿತ ಗುರುತಿಸಿದೆ.
ಶುಕ್ರವಾರ ಬೆಳಗಾವಿಯ ಹಲವು ಭಾಗಗಳಲ್ಲಿ ಭಾರಿ ಮಳೆಯಾಗಿದೆ. ಶನಿವಾರವೂ ಮೋಡಮುಸುಕಿದ ವಾತಾವರಣ ಮುಂದುವರಿದಿದೆ.
ರಾಜ್ಯದಲ್ಲಿ ಶಾಂತಿ ಕಾಪಾಡಲು ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ಮನವಿ
ಪ್ರಗತಿವಾಹಿನಿ ಸುದ್ದಿಗಳನ್ನು ನಿಮ್ಮ ಸ್ನೇಹಿತರಿಗೆ, ಬೇರೆ ಗ್ರುಪ್ ಗಳಿಗೆ ಶೇರ್ ಮಾಡಿ