ಪ್ರಗತಿವಾಹಿನಿ ಸುದ್ದಿ; ಬೆಂಗಳೂರು: ಕೆಲದಿನಗಳಿಂದ ಕೊಂಚ ಬಿಡುವು ಪಡೆದುಕೊಂಡಿದ್ದ ಮಳೆ ಇಂದಿನಿಂದ ಮತ್ತೆ ಜೋರಾಗಲಿದೆ. ಇಂದಿನಿಂದ ಸೆ. 9ರವರೆಗೆ ರಾಜ್ಯದಲ್ಲಿ ಭಾರೀ ಮಳೆಯಾಗಲಿದೆ ಎಂದು ಹವಾಮಾನ ಇಲಾಖೆ ಮುನ್ಸೂಚನೆ ನೀಡಿದೆ.
ಮಲೆನಾಡು, ಕರಾವಳಿ, ಕೊಡಗು ಹಾಗೂ ಉತ್ತರ ಕರ್ನಾಟಕದ ಕೆಲವು ಜಿಲ್ಲೆಗಳಲ್ಲಿ ಕೂಡ ಮಳೆ ಹೆಚ್ಚಾಗಲಿದೆ. ಇಂದಿನಿಂದ 4 ದಿನಗಳ ಕಾಲ ರಾಜ್ಯದ ಬಹುತೇಕ ಕಡೆ ಗುಡುಗು ಸಹಿತ ಮಳೆಯಾಗುವ ಸಾಧ್ಯತೆ ಹೆಚ್ಚಾಗಿದೆ. ಮಲೆನಾಡು ಮತ್ತು ಕರಾವಳಿಯಲ್ಲಿ ಸೆ. 10ರವರೆಗೂ ಮಳೆ ಮುಂದುವರೆಯುವ ಸಾಧ್ಯತೆಯಿದೆ.
ಬೆಂಗಳೂರು ನಗರ, ಬೆಂಗಳೂರು ಗ್ರಾಮಾಂತರ, ಮೈಸೂರು, ಮಂಡ್ಯದಲ್ಲಿ ಇಂದು ಮತ್ತು ನಾಳೆ ಭಾರೀ ಮಳೆಯಾಗುವ ನಿರೀಕ್ಷೆಯಿದೆ. ಹೀಗಾಗಿ, ಯೆಲ್ಲೋ ಅಲರ್ಟ್ ಘೋಷಿಸಲಾಗಿದೆ. ದಕ್ಷಿಣ ಒಳನಾಡಿನ ಜಿಲ್ಲೆಗಳಾದ ಚಿಕ್ಕಮಗಳೂರು, ಶಿವಮೊಗ್ಗ, ಉತ್ತರ ಕನ್ನಡ, ತುಮಕೂರು, ರಾಮನಗರ, ಚಾಮರಾಜನಗರ, ದಕ್ಷಿಣ ಕನ್ನಡ, ಉಡುಪಿ, ಹಾಸನ, ಕೊಡಗು ಜಿಲ್ಲೆಗಳಲ್ಲಿ ಇಂದಿನಿಂದ ಸೆ. 9ರವರೆಗೆ ಭಾರೀ ಮಳೆಯಾಗುವ ಸಾಧ್ಯತೆಯಿದೆ. ಈ ಹಿನ್ನೆಲೆಯಲ್ಲಿ ಆರೆಂಜ್ ಅಲರ್ಟ್ ಘೋಷಿಸಲಾಗಿದೆ.
ಪ್ರಗತಿವಾಹಿನಿ ಸುದ್ದಿಗಳನ್ನು ನಿಮ್ಮ ಸ್ನೇಹಿತರಿಗೆ, ಬೇರೆ ಗ್ರುಪ್ ಗಳಿಗೆ ಶೇರ್ ಮಾಡಿ