
ಪ್ರಗತಿವಾಹಿನಿ ಸುದ್ದಿ: ರಾಜ್ಯದ ವಿವಿಧ ಜಿಲ್ಲೆಗಳಲ್ಲಿ ಬಿರುಗಾಳಿ ಸಹಿತ ಭಾರಿ ಮಳೆಯಾಗಿದ್ದು, ವಿಜಯಪುರ ಜಿಲ್ಲೆಯಲ್ಲಿ ಸಿಡಿಲಿಗೆ ಮಹಿಳೆಯೊಬ್ಬರು ಬಳಿಯಾಗಿದ್ದಾರೆ.
ಇಂಡಿ ತಾಲೂಕಿನ ತುಂಬಾ ಗ್ರಾಮದಲ್ಲಿ ಸಿಡಿಲು ಬಡಿದು ಮಹಿಳೆ ಮೃತಪಟ್ಟಿದ್ದಾರೆ. 40 ವರ್ಷದ ಭಾರತಿ ಕೆಂಗನಾಳ ಮೃತ ಮಹಿಳೆ.
ಜಮೀನಿನಲ್ಲಿ ಕೃಷಿ ಕೆಲಸ ಮಾಡುತ್ತಿದ್ದಾಗ ಸಿಡಿಲು ಬಡಿದಿದ್ದು, ಮಹಿಳೆ ಸ್ಥಳದಲ್ಲೇ ಸಾವನ್ನಪ್ಪಿದ್ದಾರೆ. ಇಂದಿ ಗ್ರಾಮೀಣ ಠಾಣೆ ವ್ಯಾಪ್ತಿಯಲ್ಲಿ ಘಟನೆ ನಡೆದಿದೆ.
ಇನ್ನು ನಿನ್ನೆ ಕೂಡ ವಿಜಯಪುರದಲ್ಲಿ ಸಿಡಿಲಬ್ಬರದ ಮಳೆಯಾಗಿದ್ದು ಸಿಡಿಲಾರ್ಭಟಕ್ಕೆ 16 ವರ್ಷದ ಬಾಲಕ ಕೊನೆಯುಸಿರೆಳೆದಿದ್ದಾನೆ. ಈ ಘಟನೆ ಬೆನ್ನಲ್ಲೇ ಇಂದು ಮತ್ತೊಂದು ದುರಂತ ಸಂಭವಿಸಿದೆ.
ಇನ್ನು ಧಾರವಾಡ ಜಿಲ್ಲೆಯಲ್ಲಿ ಮಳೆ ಅಬ್ಬರಕ್ಕೆ 10 ವಿದ್ಯುತ್ ಕಂಬಗಳು ಧರೆಗುರುಳಿವೆ. ಧಾರವಾಡ ಜಿಲ್ಲೆಯ ಕಲಘಟಗಿ ಬಳಿ ಈ ಘಟನೆ ನಡೆದಿದ್ದು, ಅದೃಷ್ಟವಶಾತ್ ಯಾವುದೇ ಪ್ರಾಣಾಪಾಯ ಸಂಭವಿಸಿಲ್ಲ.
ಪ್ರಗತಿವಾಹಿನಿ ಸುದ್ದಿಗಳನ್ನು ನಿಮ್ಮ ಸ್ನೇಹಿತರಿಗೆ, ಬೇರೆ ಗ್ರುಪ್ ಗಳಿಗೆ ಶೇರ್ ಮಾಡಿ