*ಭಾರಿ ಮಳೆ ಮುನ್ಸೂಚನೆ: ಈ ಜಿಲ್ಲೆಗಳಲ್ಲಿ ಅಲರ್ಟ್ ಘೋಷಣೆ*

ಪ್ರಗತಿವಾಹಿನಿ ಸುದ್ದಿ: ವಾಯುಭಾರ ಕುಸಿತದಿಂದಾಗಿ ಕರಾವಳಿ, ಮಲೆನಾಡು ಹಾಗೂ ಒಳನಾಡು ಜಿಲ್ಲೆಗಳಲ್ಲಿ ಭಾರಿ ಮಳೆಯಾಗುವ ಸಾಧ್ಯತೆಯಿದೆ ಎಂದು ಹವಾಮಾನ ಇಲಾಖೆ ಮುನ್ಸೂಚನೆ ನೀಡಿದೆ. ಈ ಹಿನ್ನೆಲೆಯಲ್ಲಿ ಹಲವು ಜಿಲ್ಲೆಗಳಲ್ಲಿ ಅಲರ್ಟ್ ಘೋಷಿಸಲಾಗಿದೆ. ಸಮುದ್ರ ಮಟ್ಟದಲ್ಲಿ ಉಂಟಾಗಿರುವ ಸುಳಿಗಾಳಿ ಹಾಗೂ ಗಾಳಿಯ ವೇಗ ಹೆಚ್ಚಿರುವುದರಿಂದ ರಾಜ್ಯದ ವಿವಿಧ ಭಾಗಗಳಲ್ಲಿ ಇಂದಿನಿಂದ ಮಳೆಯ ಪ್ರಮಾಣ ಹೆಚ್ಚಾಗಲಿದೆ. ರಾಜಧಾನಿ ಬೆಂಗಳೂರು ಸೇರಿದಂತೆ ಹಲವು ಜಿಲ್ಲೆಗಳಲ್ಲಿ ಮುಂದಿನ 24 ರಿಂದ 48 ಗಂಟೆಗಳ ಕಾಲ ಮೋಡಕವಿದ ವಾತಾವರಣದೊಂದಿಗೆ ಸಾಧಾರಣದಿಂದ ಭಾರಿ ಮಳೆಯಾಗುವ ಸಾಧ್ಯತೆಯಿದೆ.Home … Continue reading *ಭಾರಿ ಮಳೆ ಮುನ್ಸೂಚನೆ: ಈ ಜಿಲ್ಲೆಗಳಲ್ಲಿ ಅಲರ್ಟ್ ಘೋಷಣೆ*