ವರುಣಾರ್ಭಟಕ್ಕೆ ಬೆಂಗಳೂರು ತತ್ತರ
ಪ್ರಗತಿವಾಹಿನಿ ಸುದ್ದಿ: ರಾಜ್ಯದಲ್ಲಿ ವರುಣಾರ್ಭಟ ಮತ್ತೆ ಜೋರಾಗಿದೆ. ಬಂಗಾಳಕೊಲ್ಲಿಯಲ್ಲಿ ವಾಯುಭಾರ ಕುಸಿತಗೊಂಡಿರುವ ಹಿನ್ನೆಲೆಯಲ್ಲಿ ಕರ್ನಾಟಕ, ತಮಿಳುನಾಡು, ಆಂಧ್ರಪ್ರದೇಶ ಸೆರಿದಂತೆ ಹಲವು ರಾಜ್ಯಗಳಲ್ಲಿ ಭಾರಿ ಮಳೆಯಾಗುತ್ತಿದೆ. ಈ ನಡುವೆ ಕರ್ನಾಟಕದಲ್ಲಿ ಮುಂದಿನ 24 ಗಂಟೆಗಳ ಕಾಲ ಧಾರಾಕಾರ ಮಳೆಯಾಗಲಿದೆ ಎಂದು ಹವಾಮಾನ ಇಲಾಖೆ ಮುನ್ಸೂಚನೆ ನೀಡಿದೆ.
ರಾಜ್ಯ ರಾಜಧಾನಿ ಬೆಂಗಳೂರು ಸೇರಿದಂತೆ 12 ಜಿಲ್ಲೆಗಳಲ್ಲಿ ಯೆಲ್ಲೋ ಅಲರ್ಟ್ ಘೋಷಿಸಲಾಗಿದೆ. ಬೆಂಗಳೂರಿನಲ್ಲಿ ಇನ್ನೂ ಮೂರು ದಿನಗಳ ಕಾಲ ಭಾರಿ ಮಳೆಯಾಗಲಿದೆ. ಕರಾವಳಿ ಜಿಲ್ಲೆಗಳಲ್ಲಿ ಇಂದು ಮತ್ತು ನಾಳೆ ಧಾರಾಕಾರ ಮಳೆಯಾಗಲಿದೆ.
ಬೆಂಗಳೂರು ನಗರ, ಬೆಂಗಳೂರು ಗ್ರಾಮಾಂತರ, ಮಂಡ್ಯ, ರಾಮನಗರ, ಮೈಸೂರು, ಕೋಲಾರ, ಚಾಮರಾಜನಗರ, ತುಮಕೂರು, ದಕ್ಷಿಣ ಕನ್ನಡ, ಉತ್ತರ ಕನ್ನಡ, ಉಡುಪಿ, ಚಿಕ್ಕಮಗಳೂರು ಜಿಲ್ಲೆಗಳಲ್ಲಿ ಭಾರಿ ಮಳೆಯಾಗಲಿದೆ.
ಹಾಸನ, ಚಿತ್ರದುರ್ಗ, ದಾವಣಗೆರೆ, ಬಳ್ಳಾರಿ, ಬೆಳಗಾವಿ, ಗದಗ, ಹಾವೇರಿ ಸೆರಿದಂತೆ ಉತ್ತರ ಒಳನಾಡಿನ ಜಿಲ್ಲೆಗಳಲ್ಲಿಯೂ ಮಳೆಯಾಗಲಿದೆ ಎಂದು ಹವಾಮಾನ ಇಲಾಖೆ ತಿಳಿಸಿದೆ.
ರಾಜ್ಯ ರಾಜಧಾನಿ ಬೆಂಗಳೂರಿನಲ್ಲಿ ಎರಡು ದಿನಗಳಿಂದ ನಿರಂತರ ಮಳೆಯಾಗುತ್ತಿದ್ದು, ಇನ್ನೂ ಮೂರು ದಿನಗಳಕಾಲ ಮಳೆಯಾಗಲಿದೆ ಎಂದು ಹವಾಮಾನ ಇಲಾಖೆ ತಿಳಿಸಿದೆ. ನಿನ್ನೆ ರಾತ್ರಿಯಿಂದ ಬಿಟ್ಟು ಬಿಡದೇ ಸುರಿಯುತ್ತಿರುವ ವರುಣಾರ್ಭಟಕ್ಕೆ ಬೆಂಗಳೂರಿನ ಪ್ರಮುಖ ರಸ್ತೆಗಳು ಸಂಪೂರ್ಣ ಜಲಾವೃತಗೊಂಡಿದ್ದು, ಪ್ರವಾಹ ಸ್ಥಿತಿ ನಿರ್ಮಾಣವಾಗಿದೆ. ನಗರವಾಸಿಗಳು ಹೈರಾಣಾಗಿದ್ದಾರೆ.
ಪ್ರಗತಿವಾಹಿನಿ ಸುದ್ದಿಗಳನ್ನು ನಿಮ್ಮ ಸ್ನೇಹಿತರಿಗೆ, ಬೇರೆ ಗ್ರುಪ್ ಗಳಿಗೆ ಶೇರ್ ಮಾಡಿ