Karnataka News

*ಭಾರಿ ಮಳೆ: ಈ 5 ಜಿಲ್ಲೆಗಳಲ್ಲಿ ಅಲರ್ಟ್ ಘೋಷಣೆ*

ಪ್ರಗತಿವಾಹಿನಿ ಸುದ್ದಿ: ರಾಜ್ಯದಲ್ಲಿ ಮತ್ತೆ ಮಳೆ ಅಬ್ಬರ ಜೋರಾಗಿದೆ. ಗುರುವಾರ ಹಾಗೂ ಶುಕ್ರವಾರ 5 ಜಿಲ್ಲೆಗಳಲ್ಲಿ ಯೆಲ್ಲೋ ಅಲರ್ಟ್ ಘೋಷಿಸಲಾಗಿದೆ.

ಚಿಕ್ಕಮಗಳೂರು, ಶಿವಮೊಗ್ಗ ಜಿಲ್ಲೆಗಳಲ್ಲಿ ನಾಳೆ ಗುರುವಾರ ಭಾರಿ ಮಳೆಯಾಗುವ ಸಾಧ್ಯತೆ ಇದ್ದು, ಯೆಲ್ಲೋ ಅಲರ್ಟ್ ಘೋಷಿಸಲಾಗಿದೆ. ಉತ್ತರ ಕನ್ನಡ, ಉಡುಪಿ, ದಕ್ಷಿಣ ಕನ್ನಡ ಜಿಲ್ಲೆಗಳಲ್ಲಿ ಗುಡುಗು ಸಹಿತ ಮಳೆಯಾಗಲಿದ್ದು, ಯೆಲ್ಲೋ ಅಲರ್ಟ್ ಘೋಷಿಸಲಾಗಿದೆ.

Home add -Advt

ಕೋಲಾರ, ಚಿಕ್ಕಬಳ್ಳಾಪುರ, ರಾಮನಗರ, ಬೆಂಗಳೂರು ಗ್ರಾಮಾಂತರ, ಬೆಂಗಳೂರು ನಗರ, ತುಮಕೂರು, ಮೈಸೂರು, ಚಿತ್ರದುರ್ಗ, ಹಾಸನ ಮಂಡ್ಯ, ದಾವಣಗೆರೆ ಜಿಲ್ಲೆಗಳಲ್ಲಿ ಹಗುರ ಮಳೆಯಾಗಲಿದೆ.

ಧಾರವಾಡ, ಬೆಳಗಾವಿ, ಹಾವೇರಿ, ಗದಗ, ಬೀದರ್, ಕಲಬುರಗಿ ಜಿಲ್ಲೆಗಳಲ್ಲಿ ಕೂಡ ಮಳೆಯಾಗಲಿದೆ ಎಂದು ಹವಾಮಾನ ಇಲಾಖೆ ಮುನ್ಸೂಚನೆ ನೀಡಿದೆ.


Related Articles

Back to top button