Karnataka News

*ವರುಣಾರ್ಭಟಕ್ಕೆ 8 ಜನರು ಬಲಿ: ಈ ಜಿಲ್ಲೆಗಳಲ್ಲಿ ಒಂದು ವಾರ ಮಳೆ; ಅಲರ್ಟ್ ಘೋಷಣೆ*

ಪ್ರಗತಿವಾಹಿನಿ ಸುದ್ದಿ: ರಾಜ್ಯದ ವಿವಿಧ ಜಿಲ್ಲೆಗಳಲ್ಲಿ ಗುಡುಗು, ಸಿಡುಲು ಸಹಿತ ಭಾರಿ ಮಳೆಯಾಗಿದ್ದು, ಮಳೆಯಿಂದಾದ ಅವಾಂತರದಲ್ಲಿ 8 ಜನರು ಸಾವನ್ನಪ್ಪಿದ್ದಾರೆ.

Home add -Advt

ಭಾರಿ ಮಳೆಯಿಂದಾಗಿ ರಾಜ್ಯದಲ್ಲಿ ಹಲವೆಡೆ ಅನಾಹುತ ಸಂಭವಿಸಿದ್ದು, ಸಿಡಿಲು ಬಡಿದು ಹಾಗೂ ಇತರ ಮಳೆ ಅನಾಹುತದಿಂದಾಗಿ ಈವರೆಗೆ 8 ಜನರು ಸಾವನ್ನಪ್ಪಿದ್ದಾರೆ ಎಂದು ತಿಳಿದುಬಂದಿದೆ. ಈ ನಡುವೆ ಇನ್ನೂ ಒಂದು ವಾರ ರಾಜ್ಯದಲ್ಲಿ ವ್ಯಾಪಕ ಮಳೆಯಾಗಲಿದೆ ಎಂದು ಹವಾಮಾನ ಇಲಾಖೆ ಮುನ್ಸೂಚನೆ ನೀಡಿದೆ.

ಮುಂದಿನ ಒಂದು ವಾರಗಳ ಕಾಲ ರಾಜ್ಯಾದ್ಯಂತ ಭಾರಿ ಮಳೆಯಾಗಲಿದ್ದು, ಹಲವು ಜಿಲ್ಲೆಗಳಲ್ಲಿ ಯೆಲ್ಲೋ ಅಲರ್ಟ್ ಘೋಷಿಸಲಾಗಿದೆ. ದಕ್ಷಿಣ ಕನ್ನಡ, ಉತ್ತರ ಕನ್ನದ, ಉಡುಪಿ ಜಿಲ್ಲೆಗಳಲ್ಲಿ ಸಾಧಾರಣ ಮಳೆಯಾಗಲಿದೆ.

ಬೀದರ್, ಬಾಗಲಕೋಟೆ, ಕಲಬುರಗಿ, ಕೊಪ್ಪಳ, ರಾಯಚೂರು, ವಿಜಯಪುರ, ಮತ್ತು ಯಾದಗಿರಿ ಜಿಲ್ಲೆಗಳಲ್ಲಿ ಗಾಳಿ ಸಹಿತ ಮಳೆಯಾಗಲಿದೆ. ಬೆಂಗಳೂರು ನಗರ, ಬೆಂಗಳೂರು ಗ್ರಾಮಾಂತರ, ಚಿಕ್ಕಬಳ್ಳಾಪುರ, ಚಿಕ್ಕಮಗಳುರು, ಕೊಡಗು, ದಾವಣಗೆರೆ, ಹಾಸನ, ಮಂಡ್ಯ, ಮೈಸೂರು, ರಾಮನಗರ, ಕೋಲಾರ, ಚಾಮರಾಜನಗರ, ಶಿವಮೊಗ್ಗ, ವಿಜಯನಗರ, ಗದಗ ಜಿಲ್ಲೆಗಳಲ್ಲಿ ಮಳೆಯಾಗಲಿದೆ.

Related Articles

Back to top button