ಪ್ರಗತಿವಾಹಿನಿ ಸುದ್ದಿ; ಬೆಂಗಳೂರು: ರಾಜ್ಯದಲ್ಲಿ ಇನ್ನೂ 4 ದಿನಗಳ ಕಾಲ ಭಾರಿ ಮಳೆ ಮುಂದುವರೆಯಲಿದೆ. ಅದರಲ್ಲಿಯೂ 5 ಜಿಲ್ಲೆಗಳಲ್ಲಿ ಅಕ್ಟೋಬರ್ 22ರವರೆಗೆ ಹಳದಿ ಅಲರ್ಟ್ ಘೋಷಿಸಲಾಗಿದೆ ಎಂದು ಹವಾಮಾನ ಇಲಾಖೆ ತಿಳಿಸಿದೆ.
ರಾಜ್ಯದ ಚಾಮರಾಜನಗರ, ಚಿಕ್ಕಮಗಳೂರು, ಶಿವಮೊಗ್ಗ, ಕೊಡಗು ಹಾಸನ ಜಿಲ್ಲೆಗಳಲ್ಲಿ ಧಾರಾಕಾರ ಮಳೆಯಾಗುವ ಸಾಧ್ಯತೆ ಇದೆ. ರಾಜಧಾನಿ ಬೆಂಗಳೂರಿನಲ್ಲಿ ಇನ್ನೂ ಎರಡು ದಿನಗಳ ಕಾಲ ವ್ಯಾಪಕ ಮಳೆಯಾಗಲಿದೆ ಎಂದು ಹವಾಮಾನ ಇಲಾಖೆ ತಿಳಿಸಿದೆ.
ಬೆಂಗಳೂರಿನಲ್ಲಿ ದಾಖಲೆ ಪ್ರಮಾಣದಲ್ಲಿ ಮಳೆಯಾಗಿದ್ದು, ಈ ವರ್ಷ 1706 ಮೀ.ಮೀ ಮಳೆಯಾಗಿದೆ. 2017ರಲ್ಲಿ ಬೆಂಗಳೂರಿನಲ್ಲಿ 1696 ಮೀ.ಮೀ ಮಳೆಯಾಗಿತ್ತು. ಆ ದಾಖಲೆಯನ್ನು ಈ ಬಾರಿ ಮಳೆ ಮುರಿದಿದೆ.
ಕರ್ನಾಟಕದ ದಕ್ಷಿಣ ಒಳನಾಡಿನ ಬಳ್ಳಾರಿ, ಚಿತ್ರದುರ್ಗ, ಬೆಂಗಳೂರು ನಗರ, ಗ್ರಾಮಾಂತರ, ಚಿಕ್ಕಮಗಳೂರು, ಹಾಸನ, ಕೊಡಗು, ಮಂಡ್ಯ, ಶಿವಮೊಗ್ಗ, ತುಮಕೂರು ಜಿಲ್ಲೆಗಳಲ್ಲಿ ಇಂದು ಮಳೆ ಹೆಚ್ಚಾಗಲಿದೆ. ಕರಾವಳಿ ಜಿಲ್ಲೆಗಳಲ್ಲಿಯೂ ಅಧಿಕ ಮಳೆಯಾಗಲಿದ್ದು ಯೆಲ್ಲೋ ಅಲರ್ಟ್ ಘೋಷಿಸಲಾಗಿದೆ.
ಉತ್ತರ ಒಳನಾಡಿನ ಬಾಗಲಕೋಟೆ, ಬೆಳಗಾವಿ, ಧಾರವಾಡ, ಹಾವೇರಿ, ಕಲಬುರ್ಗಿ, ಕೊಪ್ಪಳ ಜಿಲ್ಲೆಗಳಲ್ಲಿ ಯೆಲ್ಲೋ ಅಲರ್ಟ್ ಘೋಷಿಸಲಾಗಿದೆ. ದಕ್ಷಿಣ ಒಳನಾಡಿನ ಬಳ್ಳಾರಿ, ಬೆಂಗಳೂರು ಗ್ರಾಮಾಂತರ, ಬೆಂಗಳೂರು ನಗರ, ಚಾಮರಾಜನಗರ, ಚಿಕ್ಕಮಗಳೂರು, ಚಿತ್ರದುರ್ಗ, ಹಾಸನ, ಕೊಡಗು, ಮಂಡ್ಯ ಶಿವಮೊಗ್ಗ, ತುಮಕೂರು ಜಿಲ್ಲೆಗಳಲ್ಲಿ ಇಂದು ಮಳೆಯಾಗುವ ಸಾಧ್ಯತೆ ಇದೆ.
ಬಂಗಾಳಕೊಲ್ಲಿಯಲ್ಲಿ ವಾಯುಭಾರ ಕುಸಿತ ಹಿನ್ನೆಲೆಯಲ್ಲಿ ಕರ್ನಾಟಕ ಸೇರಿದಂತೆ ವಿವಿಧ ರಾಜ್ಯಗಳಲಿ ವರುಣಾರ್ಭಟ ಹೆಚ್ಚಾಗಿದೆ.
ಶಿಕ್ಷಕರ ವರ್ಗಾವಣೆಗೆ 15 ಸಾವಿರ ರೂ ಲಂಚ: ಲೋಕಾಯುಕ್ತ ಬಲೆಗೆ ಬಿದ್ದ BEO
https://pragati.taskdun.com/latest/bribery-to-transfer-teacher-beo-caught-in-lokayuktas-trap/
ಪ್ರಗತಿವಾಹಿನಿ ಸುದ್ದಿಗಳನ್ನು ನಿಮ್ಮ ಸ್ನೇಹಿತರಿಗೆ, ಬೇರೆ ಗ್ರುಪ್ ಗಳಿಗೆ ಶೇರ್ ಮಾಡಿ