ಪ್ರಗತಿವಾಹಿನಿ ಸುದ್ದಿ; ಬೆಂಗಳೂರು: ರಾಜ್ಯದ ಹಲವು ಜಿಲ್ಲೆಗಳಲ್ಲಿ ಇಂದಿನಿಂದ ಜೂನ್ 27ರವರೆಗೆ ಭಾರಿ ಮಳೆಯಾಗಲಿದೆ ಎಂದು ಹವಾಮಾನ ಇಲಾಖೆ ಮುನ್ಸೂಚನೆ ನೀಡಿದೆ.
ಕರಾವಳಿ ಜಿಲ್ಲೆಗಳು, ದಕ್ಷ್ಣ ಒಳನಾಡು, ಉತ್ತರ ಒಳನಾಡಿನ ಹಲವು ಜಿಲ್ಲೆಗಳಲ್ಲಿ ಮಳೆಯಾಗಲಿದೆ. ದಕ್ಷಿಣ ಕನ್ನಡ, ಉಡುಪಿ, ಉತ್ತರ ಕನ್ನಡ ಹಾಗೂ ಬಳ್ಳಾರಿ, ಬೀದರ್, ಕಲಬುರ್ಗಿ, ಕೊಡಗು, ಶಿವಮೊಗ್ಗ, ವಿಜಯನಗರ, ತುಮಕೂರು ಜಿಲ್ಲೆಗಳಲ್ಲಿ ಭಾರಿ ಮಳೆಯಾಗುವ ಸಾಧ್ಯತೆ ಇದೆ. ಮುನ್ನೆಚ್ಚರಿಕೆ ಕ್ರಮವಾಗಿ ಯೆಲ್ಲೋ ಅಲಟ್ ಘೋಷಿಸಲಾಗಿದೆ.
ಬೆಂಗಳೂರಿನಲ್ಲಿ ಬೆಳಿಗ್ಗೆ ಮೋಡಕವಿದ ವಾತಾವರಣವಿರಲಿದ್ದು, ಸಂಜೆ ವೇಳೆಗೆ ಮಳೆಯಾಗುವ ಸಾಧ್ಯತೆ ಇದೆ.
ರಾಜ್ಯದಲ್ಲಿ ದುರ್ಬಲಗೊಂಡಿದ್ದ ಮುಂಗಾರು ಮಾರುತಗಳು ಈಗ ಹೆಚ್ಚುತ್ತಿದ್ದು, ಮಲೆನಾಡು, ಕರಾವಳಿ, ದಕ್ಷಿಣ ಒಳನಾಡಿನಲ್ಲಿ ಮುಂಗಾರು ಮಾರುತಗಳು ಪ್ರಬಲಗೊಂಡಿರುವುದರಿಂದ ಮೋಡಕವಿದ ವಾತಾವರಣದ ಜೊತೆಗೆ ಆಗಾಗ ಅಲ್ಲಲ್ಲಿ ಮಳೆಯಾಗಲಿದೆ ಎಂದು ತಿಳಿಸಿದೆ.
ಪ್ರಗತಿವಾಹಿನಿ ಸುದ್ದಿಗಳನ್ನು ನಿಮ್ಮ ಸ್ನೇಹಿತರಿಗೆ, ಬೇರೆ ಗ್ರುಪ್ ಗಳಿಗೆ ಶೇರ್ ಮಾಡಿ