Karnataka NewsLatest

*ಭಾರೀ ಮಳೆ ಮುನ್ಸೂಚನೆ; ಈ ಜಿಲ್ಲೆಗಳಲ್ಲಿ ಯೆಲ್ಲೋ ಅಲರ್ಟ್ ಘೋಷಣೆ*

ಪ್ರಗತಿವಾಹಿನಿ ಸುದ್ದಿ: ರಾಜ್ಯದ ಹಲವು ಜಿಲ್ಲೆಗಳಲ್ಲಿ ಧಾರಾಕಾರ ಮಳೆಯಾಗಿದ್ದು, ಈ ನಡುವೆ ಮೇ 18ರವರೆಗೂ ಬಹುತೇಕ ಜಿಲ್ಲೆಗಳಲ್ಲಿ ಮಳೆಯಾಗಲಿದೆ ಎಂದು ಹವಾಮಾನ ಇಲಾಖೆ ತಿಳಿಸಿದೆ.

ಉತ್ತರ ಕನ್ನಡ, ದಕ್ಷಿಣ ಕನ್ನಡ, ಉಡುಪಿ, ಬೆಳಗಾವಿ, ಬೀದರ್, ಧಾರವಾಡ, ಗದಗ, ಹಾವೇರಿ, ಕಲಬುರ್ಗಿ, ರಾಯಚೂರು, ಯಾದಗಿರಿ, ಹಾಸನ, ಕೊಡಗು, ಮೈಸೂರು, ಶಿವಮೊಗ್ಗ ಜಿಲ್ಲೆಗಳಲ್ಲಿ ಅತಿ ಹೆಚ್ಚು ಮಳೆಯಾಗಲಿದೆ. ಈ ಹಿನ್ನೆಲೆಯಲ್ಲಿ ಯೆಲ್ಲೋ ಅಲರ್ಟ್ ಘೋಷಣೆ ಮಾಡಲಾಗಿದೆ.

ಬೆಂಗಳೂರು ನಗರ, ಬೆಂಗಳೂರು ಗ್ರಾಮಾಂತರ, ಚಾಮರಾಜನಗರ, ಚಿತ್ರದುರ್ಗ, ದಾವಣಗೆರೆ, ಕೋಲಾರ, ಮಂಡ್ಯ, ರಾಮನಗರ, ತುಮಕೂರು, ವಿಜಯನಗರ ಜಿಲ್ಲೆಗಳಲ್ಲಿಯೂ ಮಳೆಯಾಗಲಿದೆ ಎಂದು ತಿಳಿಸಿದೆ.


Related Articles

Back to top button