Latest

*11ಕ್ಕೂ ಹೆಚ್ಚು ಜಿಲ್ಲೆಗಳಲ್ಲಿ ಧಾರಾಕಾರ ಮಳೆ; ಅಲರ್ಟ್ ಘೋಷಣೆ*

ಪ್ರಗತಿವಾಹಿನಿ ಸುದ್ದಿ: ರಾಜ್ಯದಲ್ಲಿ ಮುಂಗಾರು ಚುರುಕುಗೊಂಡಿದೆ. ಬಹುತೇಕ ಜಿಲ್ಲೆಗಳಲ್ಲಿ ವರುಣಾರ್ಭಟ ಜೋರಾಗಿದೆ. ರಾಜ್ಯದ 11ಕ್ಕೂ ಹೆಚ್ಚು ಜಿಲ್ಲೆಗಳಲ್ಲಿ ಇಂದು ಭಾರಿ ಮಳೆಯಗಲಿದೆ ಎಂದು ಹವಾಮಾನ ಇಲಾಖೆ ಮುನ್ಸೂಚನೆ ನೀಡಿದೆ.

Home add -Advt

ಕರಾವಳಿ ಜಿಗಳು, ಮೈಸೂರು, ಕೋಲಾರ, ತುಮಕೂರು , ಬೆಳಗಾವಿ, ಕಲಬುರ್ಗಿ, ಯಾದಗಿರಿ, ಚಾಮರಾಜನಗರ, ಚಿಕ್ಕಬಳ್ಳಾಪುರ, ರಾಮನಗರ ಸೇರಿದಂತೆ ಹಲವೆಡೆ ಮಳೆಯಗಲಿದ್ದು, ಯೆಲ್ಲೋ ಅಲರ್ಟ್ ಘೋಷಿಸಲಾಗಿದೆ.

ಕಲಬುರ್ಗಿ ಜಿಲ್ಲೆಅಲ್ಲಿ ಅತಿ ಹೆಚ್ಚು ಮಳೆಯಾಗಿದೆ ಎಂದು ತಿಳಿದುಬಂದಿದೆ. ರಾಜಧಾನಿ ಬೆಂಗಳೂರಿನಲ್ಲಿ ಇಂದು ಮುಂಜಾನೆಯಿಂದಲೇ ಜಿಟಿ ಜಿಟಿ ಮಳೆಯಾಗುತ್ತಿದ್ದು, ಸಂಜೆ ವೇಳೆಗೆ ಗುಡುಗು ಸಹಿತ ಭಾರಿ ಮಳೆಯಾಗುವ ನಿರೀಕ್ಷೆ ಇದೆ.


Related Articles

Back to top button