Latest

ನನಗೆ ಅಸಮಾಧಾನವಿದೆ, 2-3 ದಿನಗಳಲ್ಲಿ ನಿರ್ಧಾರ ತಿಳಿಸುವೆ ಎಂದ ಎಂಟಿಬಿ ನಾಗರಾಜ

 

ಪ್ರಗತಿವಾಹಿನಿ ಸುದ್ದಿ; ಬೆಂಗಳೂರು: ಖಾತೆ ಹಂಚಿಕೆಯಾಗುತ್ತಿದ್ದಂತೆ ಅಸಮಾಧಾನಗಳು ಸ್ಫೋಟಗೊಂಡಿದ್ದು, ಆನಂದ್ ಸಿಂಗ್, ಶ್ರೀರಾಮುಲು ಬೆನ್ನಲ್ಲೇ ಇದೀಗ ಎಂಟಿಬಿ ನಾಗರಾಜ್ ಅಸಮಾಧಾನ ಹೊರಹಾಕಿದ್ದಾರೆ.

ಈ ಕುರಿತು ಟ್ವೀಟ್ ಮಾಡಿರುವ ಸಚಿವ ಎಂಟಿಬಿ, ಈ ಹಿಂದಿನ ಮುಖ್ಯಮಂತ್ರಿಗಳು ಮತ್ತು ಈಗಿನ ಮುಖ್ಯಮಂತ್ರಿಗಳು ನನಗೆ ಕೊಟ್ಟ ಮಾತಿನಂತೆ ನಡೆದುಕೊಂಡಿಲ್ಲ. ಖಾತೆ ಹಂಚಿಕೆಯಲ್ಲಿ ನನಗೆ ಅಸಮಾಧಾನವಿದೆ. ಮುಂದಿನ 2-3 ದಿನಗಳಲ್ಲಿ ನನ್ನ ನಿರ್ಧಾರ ತಿಳಿಸುವೆ ಎಂದು ಹೇಳಿದ್ದಾರೆ.

ತಮಗೆ ನೀಡಲಾಗಿರುವ ಪರಿಸರ ಹಾಗೂ ಪ್ರವಾಸೋದ್ಯಮ ಖಾತೆ ಬಗ್ಗೆ ಅಸಮಾಧಾನ ವ್ಯಕ್ತಪಡಿಸಿದ್ದ ಆನಂದ್ ಸಿಂಗ್ ಸಿಎಂ ಜೊತೆ ಮತ್ತೊಮ್ಮೆ ಮಾತುಕತೆ ನಡೆಸುತ್ತೇನೆ. ಖಾತ ಬದಲಾವಣೆ ಮಾಡದಿದ್ದಲ್ಲಿ ಮುಂದಿನ ನಿರ್ಧಾರ ಕೈಗೊಳ್ಳುವುದಾಗಿ ಎಚ್ಚರಿಸಿದ್ದರು. ಇದರ ಬೆನ್ನಲ್ಲೇ ಇದೀಗ ಸಚಿವ ಎಂಟಿಬಿ ನಾಗರಾಜ್, ತಮಗೆ ನೀಡಿರುವ ಪೌರಾಡಳಿತ ಖಾತೆ ಬಗ್ಗೆ ಅಸಮಾಧಾನ ಹೊರಹಾಕಿದ್ದಾರೆ.

ಖಾತೆ ಹಂಚಿಕೆ ಬೆನ್ನಲ್ಲೇ ಅಸಮಾಧಾನ ಸ್ಫೋಟ

Related Articles

Back to top button