Kannada NewsKarnataka NewsLatest

*ಭಾರಿ ಮಳೆ ಮುನ್ಸೂಚನೆ ನೀಡಿದ ಹವಾಮಾನ ಇಲಾಖೆ*: *ಈ ಜಿಲ್ಲೆಗಳಲ್ಲಿ ಅಲರ್ಟ್ ಘೋಷಣೆ*

ಪ್ರಗತಿವಾಹಿನಿ ಸುದ್ದಿ: ರಾಜ್ಯದಲ್ಲಿ ಹಿಂಗಾರು ಮಳೆ ಆರ್ಭಟ ಜೋರಾಗಿದ್ದು, ಎರಡು ದಿನಗಳಿಂದ ಹಲವು ಜಿಲ್ಲೆಗಳಲ್ಲಿ ಉತ್ತಮ ಮಳೆಯಾಗುತ್ತಿದೆ. ಇನ್ನೂ ಎರಡು ದಿನಗಳ ಕಾಲ ರಾಜ್ಯದಲ್ಲಿ ಭಾರಿ ಮಳೆಯಾಗಲಿದೆ ಎಂದು ಹವಾಮಾನ ಇಲಾಖೆ ಮುನ್ಸೂಚನೆ ನೀಡಿದೆ.

ರಾಜ್ಯ ರಾಜಧಾನಿ ಬೆಂಗಳೂರಿನಲ್ಲಿ ಎರಡು ದಿನಗಳಿಂದ ಸುರಿಯುತ್ತಿರುವ ಧಾರಾಕಾರ ಮಳೆಯಿಂದಾಗಿ ಜನಜೀವನ ಅಸ್ತವ್ಯಸ್ಥಗೊಂಡಿದೆ. ಇನ್ನೂ ಎರಡು ದಿನಗಳ ಕಾಲ ಮಳೆಯ ಅಬ್ಬರ ಜೋರಾಗಿರಲಿದೆ ಎಂದು ಹವಾಮಾನ ಇಲಾಖೆ ತಿಳಿಸಿದೆ.

ತಮಿಳುನಾಡು ಹಾಗೂ ಅರಬ್ಬಿ ಸಮುದ್ರ ಮತ್ತು ಲಕ್ಷದ್ವೀಪ ವ್ಯಾಪ್ತಿಯಲ್ಲಿ ಉಂಟಾಗಿರುವ ಮೇಲ್ಮೈ ಸುಳಿಗಾಳಿ ಹಾಗೂ ಟ್ರಫ್‌ಗಳ ಪರಿಣಾಮವಾಗಿ ರಾಜ್ಯದಲ್ಲಿ ಮಳೆಯ ತೀವ್ರತೆ ಹೆಚ್ಚಾಗಲಿದೆ. ಅ.17 ಹಾಗೂ 18ರಂದು ಧಾರಾಕಾರ ಮಳೆಯಾಗಲಿದೆ. ದಕ್ಷಿಣ ಒಳನಾಡಿನ ದಕ್ಷಿಣ ಭಾಗದ ಜಿಲ್ಲೆಗಳಲ್ಲಿ ಮಳೆಯ ಅಬ್ಬರ ಹೆಚ್ಚಿರಲಿದ್ದು, ಹವಾಮಾನ ಇಲಾಖೆಯು 3 ಜಿಲ್ಲೆಗಳಿಗೆ ‘ಆರೆಂಜ್ ಅಲರ್ಟ್’ ಘೋಷಿಸಲಾಗಿದೆ.

ಅ.17ರಂದು ಕೊಡಗು, ಮೈಸೂರು, ಚಾಮರಾಜನಗರ ಜಿಲ್ಲೆಗಳಲ್ಲಿ ಆರೇಂಜ್ ಅಲರ್ಟ್ ಘೋಷಿಸಲಾಗಿದೆ. ದಕ್ಷಿಣ ಕನ್ನಡ, ಉತ್ತರ ಕನ್ನಡ, ಉಡುಪಿ, ಚಿಕ್ಕಮಗಳೂರು, ಶಿವಮೊಗ್ಗ, ಹಾಸನ, ಮಂಡ್ಯ, ರಾಮನಗರ, ಬೆಂಗಳೂರು ನಗರ, ಬೆಂಗಳೂರು ಗ್ರಾಮಾಂತರ ಜಿಲ್ಲೆಗಳಲ್ಲಿ ಯೆಲ್ಲೋ ಅಲರ್ಟ್ ಘೋಷಿಸಲಾಗಿದೆ.

ಅ.18ರಂದು ದಕ್ಷಿಣ ಕನ್ನಡ, ಉಡುಪಿ, ಕೊಡಗು, ಶಿವಮೊಗ್ಗ, ಚಿಕ್ಕಮಗಳೂರು, ಹಾಸನ, ದಾವಣಗೆರೆ, ಚಿತ್ರದುರ್ಗ, ತುಮಕೂರು ಜಿಲ್ಲೆಗಳಿಗೆ ಯೆಲ್ಲೋ ಅಲರ್ಟ್ ಸೂಚಿಸಲಾಗಿದೆ.

ಪ್ರಗತಿವಾಹಿನಿ ಸುದ್ದಿಗಳನ್ನು ನಿಮ್ಮ ಸ್ನೇಹಿತರಿಗೆ, ಬೇರೆ ಗ್ರುಪ್ ಗಳಿಗೆ ಶೇರ್ ಮಾಡಿ

Related Articles

Back to top button