*ಬೆಳಗಾವಿ ಸೇರಿದಂತೆ ಹಲವು ಜಿಲ್ಲೆಗಳಲ್ಲಿ ಭಾರಿ ಮಳೆ ಎಚ್ಚರಿಕೆ; ರಾಜ್ಯದಲ್ಲಿ ಇನ್ನೂ 5 ದಿನ ಮಳೆ ಅಬ್ಬರ*
ಪ್ರಗತಿವಾಹಿನಿ ಸುದ್ದಿ; ಬೆಂಗಳೂರು: ರಾಜ್ಯದಲ್ಲಿ ಭಾರಿ ಮಳೆಯಾಗುತ್ತಿದ್ದು, ಉತ್ತರ ಕರ್ನಾಟಕ, ಕರಾವಳಿ ಜಿಲ್ಲೆಗಳಲ್ಲಿ ವರುಣಾರ್ಭಟ ಜೋರಾಗಿದೆ. ಜನಜೀವನ ಅಸ್ತವ್ಯಸ್ಥಗೊಂಡಿದೆ.
ಈಗಗಲೇ ಬೆಳಗಾವಿ, ಬೀದರ್ ಜಿಲ್ಲೆಗಳಲ್ಲಿ ನಿರಂತರ ಮಳೆಯಿಂದಾಗಿ ಹಲವು ಪ್ರದೇಶಗಳು ಜಲಾವೃತಗೊಂಡಿವೆ. ಬೆಳಗಾವಿ, ಕಲಬುರ್ಗಿ, ಬೀದರ್ ಜಿಲ್ಲೆಗಳಲ್ಲಿ ಧಾರಾಕಾರ ಮಳೆಯಾಗಲಿದೆ. ಬೆಳಗಾವಿ, ಬೀದರ್, ಧರವಾಡ, ಕಲಬುರ್ಗಿ, ರಾಯಚೂರು, ಯಾದಗಿರಿ ಜಿಲ್ಲೆಗಳಲ್ಲಿ ಬಿರುಗಾಳಿ ಸಹಿತ ಧಾರಾಕಾರ ಮಳೆಯಾಗಲಿದೆ ಎಂದು ಹವಾಮಾನ ಇಲಾಖೆ ಎಚ್ಚರಿಕೆ ನೀಡಿದೆ.
ಕರಾವಳಿ ಜಿಲ್ಲೆಗಳಾದ ಉತ್ತರ ಕನ್ನಡ, ದಕ್ಷಿಣ ಕನ್ನಡ, ಉಡುಪಿ ಜಿಲ್ಲೆಗಳಲ್ಲಿ ಮುಂದಿನ ಐದು ದಿನಗಳ ಕಾಲ ಭಾರಿ ಮಳೆಯಾಗಲಿದೆ. ಒಟ್ಟಾರೆ ರಾಜ್ಯದಲ್ಲಿ ಇನ್ನೂ ಐದು ದಿನಗಳ ಕಾಲ ಮಳೆಯಾಗಲಿದೆ. ಉತ್ತರ ಒಳನಾಡು, ದಕ್ಷಿಣ ಒಳನಾಡಿನ ಹಲವು ಜಿಲ್ಲೆಗಳಲ್ಲಿ ಭಾರಿ ಮಳೆಯಾಗಲಿದೆ. ಗದಗ, ಹಾವೇರಿ, ಕೊಪ್ಪಳ ಜಿಲ್ಲೆಯಲ್ಲಿ ಸಾಧಾರಣ ಮಳೆಯಾಗಲಿದೆ.
ದಕ್ಷೀನ ಒಲನಾಡಿನ ಚಿಕ್ಕಮಗಳೂರು, ಕೊಡಗು, ಶಿವಮೊಗ್ಗ ಜಿಲ್ಲೆಗಳಲ್ಲಿ ಐದು ದಿನ ಬಿರುಗಾಳಿ ಮಳೆಯಾಗಲಿದೆ. ಬೆಂಗಳೂರು ನಗರ, ಬೆಂಗಳೂರು ಗ್ರಾಮಾಂತರ, ಮಂಡ್ಯ, ಮೈಸೂರು, ರಾಮನಗರ, ಕೋಲಾರ, ಹಾಸನ, ದಾವಣಗೆರೆ, ತುಮಕೂರು, ವಿಜಯನಗರ ಜಿಲ್ಲೆಗಳಲ್ಲಿ ಸಾಧಾರಣ ಮಳೆಯಾಗಲಿದೆ ಎಂದು ಹವಾಮಾನ ಇಲಾಖೆ ತಿಳಿಸಿದೆ.
ಪ್ರಗತಿವಾಹಿನಿ ಸುದ್ದಿಗಳನ್ನು ನಿಮ್ಮ ಸ್ನೇಹಿತರಿಗೆ, ಬೇರೆ ಗ್ರುಪ್ ಗಳಿಗೆ ಶೇರ್ ಮಾಡಿ