ಪಗತಿವಾಹಿನಿ ಸುದ್ದಿ; ಬೆಂಗಳೂರು: ರಾಜ್ಯದ ಕರಾವಳಿ ಭಾಗದಲ್ಲಿ ಭಾರಿ ಮಳೆಯಾಗುತ್ತಿದ್ದರೆ ಉತ್ತರ ಕರ್ನಾಟಕ ಭಾಗದ ಹಲವು ಜಿಲ್ಲೆಗಳಲ್ಲಿ ಬರದ ಛಾಯೆ ಆವರಿಸಿದೆ. ಈ ನಡುವೆ ಇಂದು ಕರಾವಳಿಯ ಮೂರು ಜಿಲ್ಲೆಗಳಿಗೆ ರೆಡ್ ಅಲರ್ಟ್ ಘೋಷಿಸಲಾಗಿದೆ.
ಉತ್ತರ ಕನ್ನಡ, ದಕ್ಷಿಣ ಕನ್ನಡ, ಉಡುಪಿ ಜಿಲ್ಲೆಗಳಲ್ಲಿ ಧಾರಾಕಾರ ಮಳೆಯಾಗುತ್ತಿದ್ದು, ಇಂದು ಇನ್ನಷ್ಟು ಮಳೆ ಹೆಚ್ಚಾಗಲಿದೆ. ಈ ಹಿನ್ನೆಲೆಯಲ್ಲಿ ಹವಾಮಾನ ಇಲಾಖೆ ರೆಡ್ ಅಲರ್ಟ್ ಘೋಷಿಸಿದೆ.
ಚಿಕ್ಕಮಗಳೂರು, ಕೊಡಗು, ಶಿವಮೊಗ್ಗ ಜಿಲ್ಲೆಗಳಲ್ಲಿಯೂ ವ್ಯಾಪಕವಾಗಿ ಮಳೆಯಾಗುತ್ತಿದ್ದು, ಚಿಕ್ಕಮಗಳೂರಿನಲ್ಲಿ ಹಲವು ಗ್ರಾಮಗಳಿಗೆ ಕಟ್ಟೆಚ್ಚರಕ್ಕೆ ಸೂಚಿಸಲಾಗಿದೆ. ಕೊಡಗು, ಚಿಕ್ಕಮಗಳೂರು ಜಿಲ್ಲೆಗಳಲ್ಲಿ ಮುನ್ನೆಚ್ಚರಿಕಾ ಕ್ರಮವಾಗಿ ಇಂದೂ ಶಾಲಾ-ಕಾಲೇಜುಗಳಿಗೆ ರಜೆ ಘೋಷಿಸಲಾಗಿದೆ.
ಬೆಳಗಾವಿ, ಬೀದರ್, ಹಾವೇರಿ, ಚಿತ್ರದುರ್ಗ, ದಾವಣಗೆರೆ, ಹಾಸನ ಜಿಲ್ಲೆಗಳಲ್ಲಿಯು ಮಳೆಯಾಗಲಿದ್ದು, ಯೆಲ್ಲೋ ಅಲರ್ಟ್ ಘೋಷಿಸಲಾಗಿದೆ. ಇನ್ನುಳಿದಂತೆ ಬಹುತೇಕ ಜಿಲ್ಲೆಗಳಲ್ಲಿ ಸಾಧಾರಣ ಮಳೆಯಾಗಲಿದೆ.
ಪ್ರಗತಿವಾಹಿನಿ ಸುದ್ದಿಗಳನ್ನು ನಿಮ್ಮ ಸ್ನೇಹಿತರಿಗೆ, ಬೇರೆ ಗ್ರುಪ್ ಗಳಿಗೆ ಶೇರ್ ಮಾಡಿ