ಪ್ರಗತಿವಾಹಿನಿ ಸುದ್ದಿ; ಬೆಂಗಳೂರು: ರಾಜ್ಯದಲ್ಲಿ ಮೈ ಕೊರೆಯುವ ಚಳಿ ಆರಂಭವಾಗಲಿದೆ ಎಂದು ಹವಾಮಾನ ಇಲಾಖೆ ಮುನ್ಸೂಚನೆ ನೀಡಿದೆ.
ಮುಂದಿನ 2-3 ದಿನಗಳಲ್ಲಿ ರಾಜ್ಯದಲ್ಲಿ ಭಾರಿ ಚಳಿ ಬೀಳಲಿದ್ದು, ಮುನ್ನೆಚ್ಚರಿಕೆ ವಹಿಸುವಂತೆ ಸೂಚಿಸಿದೆ. ರಾಜ್ಯದಲ್ಲಿ ವಿಜಯಪುರ ಜಿಲ್ಲೆಯಲ್ಲಿ ಅತ್ಯಂತ ಕಡಿಮೆ ತಾಪಮಾನ ದಾಖಲಾಗಿದೆ. 10.2 ಡಿಗ್ರಿ ಸೆಲ್ಸಿಯಸ್ ಕನಿಷ್ಠ ಉಷ್ಣಾಂಶ ದಾಖಲಾಗಿದೆ.
ಚಿಕ್ಕಮಗಳೂರು, ಕರಾವಳಿ ಭಾಗದಲ್ಲಿಯೂ ವಿಪರೀತ ಚಳಿ ಆರಂಭವಾಗಿದೆ. ರಾಜ್ಯ ರಾಜಧಾನಿ ಬೆಂಗಳೂರಿನಲ್ಲಿ ಮಂಜು ಮುಸುಕಿದ ವಾತಾವರಣವಿದ್ದು, ಆಗಾಗ ಬಿರುಗಾಳಿ ಬೀಸುತ್ತಿದೆ.
ಬೆಳಗಾವಿ ವಿಮಾನ ನಿಲ್ದಾಣದಲ್ಲಿ 15.6 ಡಿಗ್ರಿಸಿ ಸೆಲ್ಸಿಯಸ್ , ಗದಗದಲ್ಲಿ 15.8 ಡಿಗ್ರಿ ಸೆಲ್ಸಿಯಸ್ ಕನಿಷ್ಠ ಉಷ್ಣಾಂಶ ದಾಖಲಾಗಿದೆ.
ಪ್ರಗತಿವಾಹಿನಿ ಸುದ್ದಿಗಳನ್ನು ನಿಮ್ಮ ಸ್ನೇಹಿತರಿಗೆ, ಬೇರೆ ಗ್ರುಪ್ ಗಳಿಗೆ ಶೇರ್ ಮಾಡಿ